ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಸುಧಾರಣೆಗೆ ರೂಪುರೇಷೆ ಸಿದ್ಧಪಡಿಸಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ 

ವಿಜಯಪುರ, 27(ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ ಜಿಲ್ಲೆಯ ಫಲಿತಾಂಶ ಸುಧಾರಣೆಗೆ ರೂಪುರೇಷೆ ಸಿದ್ಧಪಡಿಸಿಕೊಂಡು ಕಾರ್ಯನಿರ್ವಹಿಸಿ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅವರು ಸೂಚಿಸಿದರು. 

ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿನಿಲಯಗಳಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವಸತಿನಿಲಯಗಳ ಸುತ್ತಮುತ್ತಲೂ ಹಾಗು ವಸತಿನಿಲಯ ಹೊಂದಿಕೋಮಡಿರುವ ರಸ್ತೆಗೆ ಬೀದೀದೀಪಗಳ ವ್ಯವಸ್ಥೆಯನ್ನು ಕಲ್ಪಿಸಿ, ವಿದ್ಯಾರ್ಥಿಗಳ ಸುರಕ್ಷತೆ ವಹಿಸಬೇಕು. ಗ್ರಂಥಾಲಯಯಗಳಲ್ಲಿ ನಿಯತಕಾಲಿಕೆ, ಸ್ಪರ್ಧಾತ್ಮಕ ಪುಸ್ತಕಗಳನ್ನು ಒದಗಿಸಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಬಾಲಕಿಯರ ವಸತಿ ನಿಲಯಗಳಲ್ಲಿ ಸೂಕ್ತ ಸುರಕ್ಷತೆ ಒದಗಿಸಿದಲು ಸಿಸಿಟಿವಿ ಅಳವಡಿಸಿಬೇಕು. ಕಾಲಕಾಲಕ್ಕೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡಿ ನಿಲಯಗಳಲ್ಲಿ ಒದಗಿಸುತ್ತಿರುವ ಸೌಲಭ್ಯಗಳು ಮತ್ತು ಅವಶ್ಯಕ ಸಾಮಾಗ್ರಿಗಳ ಕುರಿತು ಪರೀಶೀಲಿಸಿ ವರದಿ ಸಲ್ಲಿಸಬೇಕು ಎಂದು ಅವರು ಸೂಚಿಸಿದರು.ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಟಾನಗೊಳಿಸಬೇಕು. ಈ ಕುರಿತು ಅಧಿಕಾರಿ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಒದಗಿಸಿ ಇ-ಆಫೀಸ್ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.ಮಳೆೆಯಿಂದಾಗಿರುವ ಬೆಳೆಹಾನಿ-ಮನೆಹಾನಿಯ ವಿವರ ಪಡೆದ ಅವರು, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಬೆಳೆಹಾನಿಯ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮವಹಿಸಬೇಕು. ನಿಂತ ನೀರಿನಲ್ಲಿ ಸೊಳ್ಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ಫಾಗಿಂಗ್, ಓಷಧ ಸಿಂಪಡಣೆಗೆ ಆರೋಗ್ಯ ಇಲಾಖೆ ಮುಂಜಾಗೃತೆ ವಹಿಸಬೇಕು ಎಂದು ಹೇಳಿದರು.ಆಧಾರ್ ಸೀಡಿಂಗ್, ಲ್ಯಾಂಡ್ ಬೀಟ್ ವ್ಯವಸ್ಥೆ, ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷೀ, ಯುವನಿಧಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಬಗರ್ ಹುಕುಂ ಪ್ರಗತಿ, ಭೂಮಿ ಮ್ಯೂಟೇಶನ್, ಸಕಾಲ, ಭೂ ದಾಖಲೆ ಇಲಾಖೆ, ಅಬಕಾರಿ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರೀಶೀಲನೆ ನಡೆಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಮಿಷನ್ ವಿದ್ಯಾಪುರ ಯೋಜನೆಯನ್ನು ಹಮ್ಮಿಕೊಂಡು ಆನ್ ಲೈನ್ ಮೂಲಕ ತರಗತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿವಾರ ಘಟಕ ಪರೀಕ್ಷೆಯನ್ನು ಏರಿ​‍್ಡಸಲಾಗುತ್ತಿದೆ. ರಸಪ್ರಶ್ನೆ, ಸೆಮಿನಾರ್, ಪೋನ್ ಇನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಹೆಚ್ಚಳಕ್ಕೆ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಅಗತ್ಯವಿರುವ ಶಾಲೆಗಳಿಗೆ ನಿಯೋಜಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರು ರಾಮನಗೌಡ ಹಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಇಂಡಿ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳ, ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಸಂಪತಕುಮಾರ ಗುಣಾರಿ, ಜಿಲ್ಲಾ ಪಂಜಾಯಿತಿಯ ಮುಖ್ಯ ಯೋಜನಾ ನಿರ್ದೇಶಕ ನಿಂಗಪ್ಪ ಗೋಠೆ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲಕುಮಾರ ಬಾವಿದೊಡ್ಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾ, ಪಿಆರ್‌ಇಡಿ ಕಾರ್ಯನಿವಾಹಕ ಅಭಿಯಂತರ ನಬಿಲಾಲ ಗಬಸಾವಳಗಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾಯ್ನಿರ್ವಾಹಕ ಅಭಿಯಂತರಾದ ಬಸವರಾಜ ಕುಂಬಾರ, ಹೆಸ್ಕಾಂನ ಅಧಿಕ್ಷಕ ಅಭಿಯಂತರಾರದ ಸಿದ್ದಪ್ಪ ಬಿಂಜಗೇರೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.