ಕನ್ನಡ ರಾಜ್ಯೋತ್ಸವ ವಿಜೃಂಭಣೆ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ತಹಸೀಲ್ದಾರ್ ಪ್ರಕಾಶ ಸಿಂದಗಿ
Prepare for the grand celebration of Kannada Rajyotsava: Tahsildar Prakash Sindagi
ಕನ್ನಡ ರಾಜ್ಯೋತ್ಸವ ವಿಜೃಂಭಣೆ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ತಹಸೀಲ್ದಾರ್ ಪ್ರಕಾಶ ಸಿಂದಗಿ
ದೇವರಹಿಪ್ಪರಗಿ 18: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆ ಹಾಗೂ ವೈಭವಯುತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಹಸೀಲ್ದಾರ್ ಪ್ರಕಾಶ ಸಿಂದಗಿ ಸೂಚನೆ ನೀಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1ರಂದು ವೇದಿಕೆಯ ಕಾರ್ಯಕ್ರಮ ಪಟ್ಟಣದ ಇಂಡಿ ರಸ್ತೆಯಲ್ಲಿರುವ 1008 ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗುವುದು,ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಸಾಧಕರಿಗೆ, ಮಾಜಿ ಸೈನಿಕರು ಹಾಗೂ ಕನ್ನಡದಲ್ಲಿ 100ಕ್ಕೆ 100 ಅಂಕಗಳಿಸಿದವರಿಗೆ ಸನ್ಮಾನ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 8 ಗಂಟೆಗೆ ಪಟ್ಟಣದ ಕನ್ನಡ ತಾಯಿ ಭುವನೇಶ್ವರಿಗೆ ಪೂಜ್ಯ ಸಲ್ಲಿಸಿ, ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಡೊಳ್ಳು ವಾದ್ಯಗಳ ಮೂಲಕ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಾಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಂಸ್ಕೃತಿಕ ಮಕ್ಕಳ ಕಲಾತಂಡಗಳು ಹಾಗೂ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರೂ ಭಾಗವಹಿಸಿ ಎಂದರು.ನಂತರ ಕಸಾಪ ಅಧ್ಯಕ್ಷ ಸಿದ್ದು ಮೇಲಿನಮನಿ, ಶಸಾಪ ತಾಲೂಕು ಅಧ್ಯಕ್ಷರಾದ ಎಸ್.ಎನ್. ಬಸವರೆಡ್ಡಿ, ಮಾಜಿ ಕಸಾಪ ಅಧ್ಯಕ್ಷರಾದ ಜಿ.ಪಿ. ಬಿರಾದಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎ.ಎಚ್.ವಾಲೀಕಾರ, ಮುಖಂಡರುಗಳಾದ ಶಿವರಾಜ ತಳವಾರ, ರಾವುತ ತಳಕೇರಿ, ಸಿದ್ರಾಮಪ್ಪ ಅವಟಿ, ವಿಜಯಕುಮಾರ ಯಂಬತ್ನಾಳ, ಚಂದ್ರು ದಾನಗೊಂಡ ಮಾತನಾಡಿ, ಕಚೇರಿ ಅಂಗಡಿಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಲು ಒತ್ತಾಯಿಸಿ ಕಾರ್ಯಕ್ರಮ ಯಶಸ್ವಿಗೆ ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಅಕ್ಷರ ದಾಸೋಹ ನಿರ್ದೇಶಕ ಅರವಿಂದ ಡೋಣೂರ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ರವೀಂದ್ರ ಬಂಥನಾಳ, ದೈಹಿಕ ಪರೀವೀಕ್ಷಣಾಧಿಕಾರಿ ರಮೇಶ ಬಿರಾದಾರ ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಗಣ್ಯರು, ಶಿಕ್ಷಕರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಂದಾಯ ಶಿರಸ್ತೇದಾರ ಸುರೇಶ ಮ್ಯಾಗೇರಿ ನಿರೂಪಿಸಿ, ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 