ಬೆಳಗಾವಿ, 8: ಜಿಲ್ಲೆಯ ಮೂರು ಮತಕ್ಷೇತ್ರಗಳ ಮತ ಎಣಿಕೆ ನಗರದ ಆರ್ಪಿ.ಡಿ. ಮಹಾವಿದ್ಯಾಲಯದಲ್ಲಿ ಸೋಮವಾರ(ಡಿ.9) ನಡೆಯಲಿದ್ದು, ಭದ್ರತೆ ಸೇರಿದಂತೆ ಮತ ಎಣಿಕೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.
ಮತ ಎಣಿಕೆ ಸಿದ್ಧತೆ ಕುರಿತು ಭಾನುವಾರ (ಡಿ.8) ಬೆಳಿಗ್ಗೆ ಮತ ಎಣಿಕೆ ಕೇಂದ್ರದ ಆವರಣದ ಮಾಧ್ಯಮ ಕೇಂದ್ರದಲ್ಲಿ ನಡೆದ ಎಲ್ಲ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭದ್ರತೆ, ಪಾಕರ್ಿಂಗ್, ಮತ ಎಣಿಕೆ ಸಿಬ್ಬಂದಿ ಗುರುತಿನಚೀಟಿ, ಅಂತಜರ್ಾಲ ಸಂಪರ್ಕ, ಅಗತ್ಯ ಉಪಕರಣಗಳನ್ನು ಒದಗಿಸುವಿಕೆ, ಅಂಚೆ ಮತ ಎಣಿಕೆ, ಚುನಾವಣಾ ವೀಕ್ಷಕರ ಕೊಠಡಿ, ಮಾಹಿತಿ ಕೇಂದ್ರ, ಊಟೋಪಹಾರ ವ್ಯವಸ್ಥೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.
ತುತರ್ು ವೈದ್ಯಕೀಯ ಸೌಲಭ್ಯಕ್ಕಾಗಿ ಅಂಬ್ಯುಲೆನ್ಸ್ ಸೌಲಭ್ಯ, ಅಗ್ನಿಶಾಮಕ ದಳ ನಿಯೋಜನೆಯನ್ನು ಖಚಿತಪಡಿಸುವಂತೆ ಸೂಚನೆ ನೀಡಿದರು.
ಸಾರ್ವಜನಿಕರಿಗೆ ಮತ ಎಣಿಕೆ ಮಾಹಿತಿಯನ್ನು ನೀಡಲು ಆರ್ಪಿ.ಡಿ. ಮುಖ್ಯದ್ವಾರ ಅಥವಾ ಕ್ರಾಸ್ ಹಾಗೂ ಪಾಕರ್ಿಂಗ್ ಸ್ಥಳದಲ್ಲಿ ಧ್ವನಿವರ್ಧಕ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಇದಕ್ಕೂ ಮುಂಚೆ ಮಾತನಾಡಿದ ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್ ಅವರು, ಮತ ಎಣಿಕೆ ಕೇಂದ್ರಕ್ಕೆ ಮೂರು ಹಂತದ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 750 ಜನರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಬೆಳಗಾವಿ ತಾಲ್ಲೂಕಿನಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.
ಒಟ್ಟಾರೆ ಶಾಂತಿಯುತ ಮತ ಎಣಿಕೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ವೀಕ್ಷಕರು ಹಾಗೂ ನಾಲ್ಕು ಜನರ ಹಿರಿಯ ಅಧಿಕಾರಿಗಳ ವಾಹನಗಳಿಗೆ ಮಾತ್ರ ಮತ ಎಣಿಕೆ ಕೇಂದ್ರದ ಆವರಣದಲ್ಲಿ ಪ್ರವೇಶ. ಉಳಿದ ವಾಹನಗಳನ್ನು ಮೈದಾನದಲ್ಲಿ ಒದಗಿಸಿರುವ ನಿಗದಿತ ಸ್ಥಳದಲ್ಲಿ ಮಾತ್ರ ಪಾಕರ್ಿಂಗ್ ಅವಕಾಶವಿರುತ್ತದೆ ಎಂದು ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ಸೀಮಾ ಲಾಟ್ಕರ್, ಯಶೋಧಾ ಒಂಟಗೋಡಿ, ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಭೂಬಾಲನ್, ಅಥಣಿ ಮತಕ್ಷೇತ್ರದ ಜಿಲಾನಿ ಮೊಖಾಶಿ, ಕಾಗವಾಡ ಚುನಾವಣಾಧಿಕಾರಿ ಗೋಪಾಲಕೃಷ್ಣ ಸಣ್ಣತಂಗಿ, ಎನ್.ಐ.ಸಿ ಅಧಿಕಾರಿ ಸಂಜೀವ ಕ್ಷೀರಸಾಗರ, ವಾತರ್ಾಧಿಕಾರಿ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.