ಬಳ್ಳಾರಿ14: 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ.
ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವ ಜಿಲ್ಲಾ ಕ್ರೀಡಾಂಗಣದಲ್ಲಿಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಕ್ರೀಡಾಂಗಣದಲ್ಲಿ ಸ್ವಚ್ಛತೆ, ವೇದಿಕೆ ಸಿದ್ಧತೆ ಮತ್ತು ಶಾಮಿಯಾನದ ವ್ಯವಸ್ಥೆ, ಕ್ರೀಡಾಂಗಣದ ಗೋಡೆಗಳಿಗೆ ಸ್ವಾತಂತ್ರ್ಯ ಸಂದೇಶ ಸಾರುವ ಗೋಡೆಬರಹ ಬರೆಯಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ವಿವಿಧ ಶಾಲೆಗಳು ವಿದ್ಯಾಥರ್ಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನೀಡಲಿದ್ದು,ಇದಕ್ಕಾಗಿ ರಿಹರ್ಸಲ್ ಕಾರ್ಯ ಚುರುಕಿನಿಂದ ನಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ ಅವರು, ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹವನ್ನು ಮಾಡಲಿದ್ದಾರೆ.
ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಲೋಕಸಭಾ ಸದಸ್ಯರಾದ, ಕರಡಿ ಸಂಗಣ್ಣ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಹಡಗಲಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ, ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆನಂದ ಸಿಂಗ್, ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕ ಈ.ತುಕಾರಾಂ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ನಾಗೇಂದ್ರ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಸೋಮಶೇಖರರೆಡ್ಡಿ, ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾನಾಯ್ಕ ಎಲ್.ಬಿ.ಪಿ, ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್, ವಿಧಾನ ಪರಿಷತ್ ಶಾಸಕರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಬಿ.ಪಾಟೀಲ, ಮಹಾನಗರಪಾಲಿಕೆಯ ಮಹಾಪೌರರಾದ ಆರ್.ಸುಶೀಲಬಾಯಿ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಧ್ವಜಾರೋಹಣ ನಂತರ ಬೆಳಿಗ್ಗೆ 9.05ಕ್ಕೆ ಮಾನ್ಯ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ,ಪಥ ಸಂಚಲನ ವೀಕ್ಷಣೆ ಮತ್ತು ಗೌರವ ಸ್ವೀಕಾರ ಮಾಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಇಂದು ಸಂಜೆ 6ಕ್ಕೆ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಧ್ವಜಾರೋಹಣಕ್ಕೂ ಮುನ್ನ ಬೆಳಿಗ್ಗೆ 7ಕ್ಕೆ ಸಚಿವರು ವಿಮ್ಸ್ ಆವರಣದಲ್ಲಿರುವ ಪೂಜ್ಯ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ.ಬಳ್ಳಾರಿ14: 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ.
ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವ ಜಿಲ್ಲಾ ಕ್ರೀಡಾಂಗಣದಲ್ಲಿಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಕ್ರೀಡಾಂಗಣದಲ್ಲಿ ಸ್ವಚ್ಛತೆ, ವೇದಿಕೆ ಸಿದ್ಧತೆ ಮತ್ತು ಶಾಮಿಯಾನದ ವ್ಯವಸ್ಥೆ, ಕ್ರೀಡಾಂಗಣದ ಗೋಡೆಗಳಿಗೆ ಸ್ವಾತಂತ್ರ್ಯ ಸಂದೇಶ ಸಾರುವ ಗೋಡೆಬರಹ ಬರೆಯಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ವಿವಿಧ ಶಾಲೆಗಳು ವಿದ್ಯಾಥರ್ಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನೀಡಲಿದ್ದು,ಇದಕ್ಕಾಗಿ ರಿಹರ್ಸಲ್ ಕಾರ್ಯ ಚುರುಕಿನಿಂದ ನಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ ಅವರು, ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹವನ್ನು ಮಾಡಲಿದ್ದಾರೆ.
ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಲೋಕಸಭಾ ಸದಸ್ಯರಾದ, ಕರಡಿ ಸಂಗಣ್ಣ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಹಡಗಲಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ, ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆನಂದ ಸಿಂಗ್, ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕ ಈ.ತುಕಾರಾಂ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ನಾಗೇಂದ್ರ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಸೋಮಶೇಖರರೆಡ್ಡಿ, ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾನಾಯ್ಕ ಎಲ್.ಬಿ.ಪಿ, ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್, ವಿಧಾನ ಪರಿಷತ್ ಶಾಸಕರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಬಿ.ಪಾಟೀಲ, ಮಹಾನಗರಪಾಲಿಕೆಯ ಮಹಾಪೌರರಾದ ಆರ್.ಸುಶೀಲಬಾಯಿ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಧ್ವಜಾರೋಹಣ ನಂತರ ಬೆಳಿಗ್ಗೆ 9.05ಕ್ಕೆ ಮಾನ್ಯ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ,ಪಥ ಸಂಚಲನ ವೀಕ್ಷಣೆ ಮತ್ತು ಗೌರವ ಸ್ವೀಕಾರ ಮಾಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಇಂದು ಸಂಜೆ 6ಕ್ಕೆ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಧ್ವಜಾರೋಹಣಕ್ಕೂ ಮುನ್ನ ಬೆಳಿಗ್ಗೆ 7ಕ್ಕೆ ಸಚಿವರು ವಿಮ್ಸ್ ಆವರಣದಲ್ಲಿರುವ ಪೂಜ್ಯ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ.