ಅರ್ಥಪೂರ್ಣ ಗಣರಾಜ್ಯೋತ್ಸವಕ್ಕೆ ಜಿಲ್ಲಾಡಳಿತದಿಂದ ಸಿದ್ಧತೆ

ಬಾಗಲಕೋಟೆ೧೭: ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 26 ರಂದು ಆಚರಿಸಲ್ಪಡುವ ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಪ ಮುಖ್ಯಮಂತ್ರಿಗಳಿಂದ ಧ್ವಜಾರೋಜಹಣ ಹಾಗೂ ಗಣರಾಜ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಗಣರಾಜ್ಯೋತ್ಸವವನ್ನು ಈ ಬಾರಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅದ್ದೂರಿಯಾಗಿ ಆಚರಿಸಬೇಕು. ಕಾರ್ಯಕ್ರಮಗಳ ಸಿದ್ದತೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಪೂರ್ವ ತಯಾರಿಗಾರಿ ಉಪ ಸಮಿತಿಗಳ ಸಭೆ ಕರೆದು ಬೇಕಾಗುವ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು. ಪೂರ್ಣ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ವಿವಿಧ ಸಮಿತಿಯವರ ಸಭೆಯಲ್ಲಿ ಚಚರ್ಿಸಿದ ಮಾಹಿತಿ ನೀಡಬೇಕು. ಪಥಸಂಚಲನ ಕಾರ್ಯಕ್ರಮದಲ್ಲಿ ಪೋಲಿಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್, ಎನ್.ಸಿ.ಸಿ. ಕೆಡೆಟ್ಗಳನ್ನು ಆಹ್ವಾನಿಸಲು ಸೂಚಿಸಲಾಯಿತು. 

ಪ್ಲಾಸ್ಟಿಕ್ ದ್ವಜ ಬಳಸುವುದನ್ನು ಹಾಗೂ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಧ್ವಜಗಳನ್ನು ತರುವುದನ್ನು ನಿರ್ಭಂದಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ತಿಳಿಸಲಾಯಿತು. ಐ.ಎಸ್ಐ ಮಾರ್ಕ ಹೊಂದಿರುವ ಧ್ವಜಗಳನ್ನು ಮಾತರ ಉಪಯೋಗಿಸಬೇಕು. ಗಣರಾಜ್ಯೋತ್ಸವದ ಎರಡು ದಿನ ಪೂರ್ವದಲ್ಲಿ ಧ್ವಜವನ್ನು ಪರೀಕ್ಷಿಸಬೇಕು. ಹರಿದ, ತೂತು ಬಿದ್ದ ಧ್ವಜವನ್ನು ಬಳಸಕೂಡದು ಎಂದರು. ಧ್ವಜಾರೋಹಣ ವ್ಯವಸ್ಥೆಗೆ ಭಾರತ ಸೇವಾದಳ, ಪೋಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ವಹಿಸಲಾಯಿತು. 

ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ , ಗಣ್ಯರಿಗೆ ಶಾಸಕರಿಗೆ, ಸಂಸದರುಗಳಿಗೆ ಹಾಗೂ ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆಯನ್ನು ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನ, ತಾಲೂಕ ಭವನ, ಜಿಲ್ಲಾಧಿಕಾರಿಗಳ ಹಾಗೂ ಆಯುಕ್ತರ ಗೃಹ ಕಚೇರಿಗಳಿಗೆ ವಿದ್ಯುತ್ ಅಲಂಕಾರ ಮಾಡುವಂತೆ ತಿಳಿಸಲಾಯಿತು. ಅಲ್ಲದೇ ಬಾಗಲಕೋಟೆ ನಗರದ ಬಸವೇಶ್ವರ ವೃತ್ತ, ಅಂಬೇಡ್ಕರ ಪುತ್ಥಳಿ, ನವನಗರದ ಎರಡು ಸರ್ಕಲ್ಕಡೆ ವಿದ್ಯುತ್ ಅಲಂಕಾರ ಮಾಡಲು ಸಹ ತಿಳಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲು ತಿಳಿಸಲಾಯಿತು. 

ರಾಷ್ಟ್ರಕವಿ ಕುವೆಂಪುರವರ ವಿರಚಿತ ನೇಗಿಲಯೋಗಿ ಹಾಡನ್ನು ರಾಷ್ಟ್ರಗೀತೆ ನಂತರ ಪರಿಣಿತ ಕಲಾವಿದರಿಂದ ಹಾಡಿಸಬೇಕು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡುವುದು, ಗಣರಾಜ್ಯೋತ್ಸವ ದಿನದಂದು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರಿಯರ್ಸಲ್ ದಿನದಂದು ಕ್ರೀಡಾಂಗಣಕ್ಕೆ ಹೋಗಿ ಬರಲು ರಿಯಾಯಿತಿ ದರದಲ್ಲಿ ವಾಹನ ವ್ಯವಸ್ಥೆಯನ್ನು ಮಾಡುವಂತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಿಳಿಸಿದರು. ಸದರಿ ದಿನದಂದು ಪೋಲಿಸ್ ಬಂದೂಬಸ್ತಿ ವ್ಯವಸ್ಥೆ ಮಾಡುವಂತೆ ಪೋಲಿಸ್ ಇಲಾಖೆಗೆ ಸೂಚಿಸಲಾಯಿತು. ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಿರಬೇಕೆಂದರು. 

ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ  ಪೂಜಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕ  ಎಂ.ಎನ್.ಮೇಲಿನಮನಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿವರ್ಾಹಕ ಅಭಿಯಂತರ ಪ್ರಶಾಂತ, ತಹಶೀಲ್ದಾರ ಗುರುಬಸಯ್ಯ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಹಿರೇಮಠ ಸೇರದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.