ಬಾಲ್ಯ ವಿವಾಹ ನಿಮರ್ೂಲನೆಗೆ ಕಾನೂನು ಸೇವಾ ಪ್ರಾಧಿಕಾರದ ನೆರವು ನೀಡಲು ಸಿದ್ಧ: ಟಿ. ಶ್ರೀನಿವಾಸ್

ಕೊಪ್ಪಳ:  ಕೊಪ್ಪಳ ಜಿಲ್ಲೆಯಲ್ಲಿ ಬಾಲ್ಯ ವಿವಾಹವೆನ್ನುವ ಅನಿಷ್ಠ ಪದ್ಧತಿಯನ್ನು ನಿಮರ್ೂಲನೆಗೊಳಿಸಲು ಅಗತ್ಯವಿರುವ ಎಲ್ಲ ನೆರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡಲು ಸಿದ್ಧವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದಶರ್ಿ ಟಿ. ಶ್ರೀನಿವಾಸ ಅವರು ಹೇಳಿದರು.

  ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ  ತಾಲೂಕಿನ ಅಗಳಕೇರಾದಲ್ಲಿ ಮಂಗಳವಾರದಂದು ಆಯೋಜಿಸಲಾಗಿದ್ದ "ಬಾಲ್ಯ ವಿವಾಹ ನಿಷೇಧ ಮತ್ತು ಮಕ್ಕಳ ಹಕ್ಕುಗಳ ಜಾಗೃತಿಗಾಗಿ ಜಾಥಾ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಸಹಪಾಠಿ ಮಕ್ಕಳೊಂದಿಗೆ ಆಟವಾಡುತ್ತಾ, ಬಾಲ್ಯದ ಸುಮಧುರ ಕ್ಷಣಗಳನ್ನು ಅನುಭವಿಸಬೇಕಾಗಿದ್ದ ಹೆಣ್ಣುಮಕ್ಕಳು ಹಸೆಮಣೆಯನ್ನು ಏರುತ್ತಿದ್ದಾರೆ. ಶಿಕ್ಷಣ ಪಡೆದು ಸ್ವಾವಲಂಬಿ ಬದುಕು ಕಟ್ಟುಕೊಳ್ಳಬೇಕಾಗಿದ್ದ ಅವರ ಹೆಗಲ ಮೇಲೆ ಕುಟುಂಬದ ಜವಾಬ್ದಾರಿ, ಮಡಿಲಲ್ಲಿ ಕರುಳಕುಡಿ ರಾಜ್ಯದಲ್ಲಿ ಜೀವಂತವಾಗಿರುವ ಬಾಲ್ಯ ವಿವಾಹ ಪಿಡುಗಿಗೆ ಹೆಣ್ಣುಮಕ್ಕಳ ಹೊಂಗನಸು ಕಮರಿ ಹೋಗುತ್ತಿವೆ. ಅಪ್ರಾಪ್ತೆಯರು ತಾಯಿಯಾಗುವುದರಿಂದ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಹೆಚ್ಚಾಗುತ್ತದೆ.  ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಮತ್ತು ತಾಯಿ, ಮಕ್ಕಳ ಅಪೌಷ್ಠಿಕತೆ ನಿವಾರಣೆ, ತಾಯಿ, ಶಿಶು ಮರಣ ಪ್ರಮಾಣ ತಗ್ಗಿಸಲು ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯ ತಡೆಯಲು ಭಾರತ ಸಕರ್ಾರವು 2006ರಲ್ಲಿಯೇ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದೆ. ಇದಕ್ಕೆ ಕನರ್ಾಟಕ ರಾಜ್ಯ ಸಕರ್ಾರವು ತಿದ್ದುಪಡಿಯನ್ನು ಮಾಡಿದ್ದು, ಅದರನ್ವಯ ಬಾಲ್ಯ ವಿವಾಹವನ್ನು ಮಾಡಿಕೊಂಡ, ಮಾಡಿದ ಹಾಗೂ ಪ್ರೋತ್ಸಾಹಿಸಿದವರಿಗೆ ಹಾಗೂ ಭಾಗವಹಿಸಿದವರಿಗೂ ಸಹ ಕನಿಷ್ಠ 1 ವರ್ಷದಿಂದ 2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷ ದಂಡವನ್ನು ವಿಧಿಸಬಹುದಾಗಿರುತ್ತದೆ. ಎಲ್ಲಾ ಬಾಲ್ಯ ವಿವಾಹಗಳು ಅಸಿಂಧು ವಿವಾಹಗಳಾಗುತ್ತಿದ್ದು, ಇವುಗಳಿಗೆ   ಕಾನೂನಿನ ಯಾವುದೇ ಮಾನ್ಯತೆಯಿರುವುದಿಲ್ಲಾ. ಪೊಲೀಸ್ ಅಧಿಕಾರಿಗಳು ಸ್ವಯಂಪ್ರೇರಿತ ಪ್ರಕರಣದಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದಾಗಿದೆ. ಅಲ್ಲದೇ ಅಂಗನವಾಡಿ ಮೇಲ್ವಿಚಾರಕಿಯರನ್ನು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರುಗಳು ಸಹ "ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಆಗಿದ್ದು" ಅವರು ಮತ್ತು ಅವರ ಮೂಲಕ ಮಕ್ಕಳು ಅಥವಾ ಮಕ್ಕಳ ಸ್ನೇಹಿತರು ಸಹ "ಬಾಲ್ಯ ವಿವಾಹವನ್ನು ಮಾಡಿದವರ, ಮಾಡಿಕೊಂಡವರ ವಿರುದ್ಧ ಪ್ರಕರಣವನ್ನು ದಾಖಲಿಸಬಹುದಾಗಿದೆ. ಬಾಲ್ಯ ವಿವಾಹಗಳನ್ನು ತಡೆಯಲು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಯಾವುದೇ ಸಹಾಯ ಬೇಕಾದಲ್ಲಿ ನೀಡಲಾಗುವದು ಎಂದು ಟಿ. ಶ್ರೀನಿವಾಸ್ ಅವರು ತಿಳಿಸಿದರು.

ಹಿರಿಯ ನ್ಯಾಯವಾದಿ ವಿ. ಎ. ಭೂಸನೂರಮಠ ಅವರು, ಭಾರತ ಸರಕಾರವು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು, ಅಪರಾಧ ಕಾಯ್ದೆಗೆ ತಿದ್ದುಪಡಿಯನ್ನು ಮಾಡಿದ್ದು, ಈ ಅಪರಾಧ ತಿದ್ದುಪಡಿ ಕಾಯ್ದೆ-2018ರನ್ವಯ 12ವರ್ಷದೊಳಗಿನ ವಯೋಮಾನದ ಮಗುವಿನ ಮೇಲಿನ ಲೈಂಗಿಕ ದೌರ್ಜನ್ಯ/ಹಲ್ಲೆ ಮಾಡುವುದು ತೀವ್ರತರ ಶಿಕ್ಷಾರ್ಹ ಅಪರಾಧವಾಗಿದೆ.  16ವರ್ಷದೊಳಗಿನ ವಯೋಮಾನದ ಮಗುವಿನ ಮೇಲಿನ ಲೈಂಗಿಕ ದೌರ್ಜನ್ಯ/ಹಲ್ಲೆ ಮಾಡುವುದು ತೀವ್ರತರ ಶಿಕ್ಷಾರ್ಹ ಅಪರಾಧವಾಗಿದೆ. ಈ ಕೃತ್ಯಕ್ಕೆ ಕನಿಷ್ಠ 20ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು ದಂಡ ಶಿಕ್ಷೆಯನ್ನು ವಿಧಿಸಬಹುದಾಗಿದೆ ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವೂ ಸಹ ಅತ್ಯಾಚಾರವೆಂದು ಘನ ಸವರ್ೋಚ್ಛ ನ್ಯಾಯಾಲಯ ಆದೇಶಿಸಿದ್ದು, ಬಾಲ್ಯವಿವಾಹವಾಗಿ ಪತ್ನಿಯೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿದರೆ ಅದೂ ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರನ್ವಯ ಅಪರಾಧವೆಂದು ಹಾಗೂ ಅತ್ಯಾಚಾರವೆಂದು ಪರಿಗಣಿಸಿ ಶಿಕ್ಷೆ ವಿಧಿಸಬಹುದಾಗಿದೆ ಎಂದು ತಿಳಿಸಿದರು.

  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಗಳಕೇರಾ ಗ್ರಾಮ ಪಂಚಾಯತಿಯ ಅಧ್ಯಕ್ಷ ನಾಗರಾಜ ಎಸ್. ಕಿನ್ನಾಳ ವಹಿಸಿದ್ದರು,   ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಡಿ. ಅಂಗನವಾಡಿ ಮೇಲ್ವಿಚಾರಕಿಯರಾದ ಭುವನೇಶ್ವರಿ ಶೀಲವಂತರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೃತಿ ಹಾಗೂ ಅಗಳಕೇರಾ ಗ್ರಾಮ ಪಂಚಾಯತಿಯ ಸರ್ವಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ ಭಾಗವಹಿಸಿದ್ದರು. ರವಿ ಬಡಿಗೇರ ನಿರೂಪಿಸಿದರು, ದೇವರಾಜ್ ತಿಲಗರ ವಂದಿಸಿದರು.