ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ, ಸಿ.ಎಂ.
ಬೆಳಗಾವಿ,ಡಿ.11- ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲಾವಿಧಾನಸಭಾ ಕ್ಷೇತ್ರಗಳಲ್ಲಿ ಆದ್ಯತೆ ಮೇರೆಗೆ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು.
ಶಾಸಕ ಉಮಾನಾಥ.ಎ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಒಂದು ಸಾವಿರ ಸಕರ್ಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಗಳನ್ನೂ ಪ್ರಾರಂಭಿಸಲು ಸಕರ್ಾರ ಆದೇಶ ಹೊರಡಿಸಲಾಗಿದೆ ಎಂದರು.
276 ಕನರ್ಾಟಕ ಪಬ್ಲಿಕ ಶಾಲೆಗಳು ಹಾಗೂ ಈಗಾಗಲೇ 6 ಮತ್ತು 7ನೇ ತರಗತಿಗಳಲ್ಲಿ ಆಂಗ್ಲ ಮಾಧ್ಯಮ ಬೋಧಿಸಲಾಗುತ್ತಿರುವ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಇಂಗ್ಲೀಷ್ ಬೋಧನೆಯಲ್ಲಿ ಪರಿಣಿತಿ ಹೊಂದಿರುವ ಕಾರ್ಯನಿರತ ಶಿಕ್ಷಕರಿಗೆ ಆಯ್ಕೆ ಪರೀಕ್ಷೆ ನಡೆಸಿ ಆಂಗ್ಲ ಮಾಧ್ಯಮ ತರಗತಿ ಬೋಧಿಸಲು ನಿಯೋಜಿಸಲಾಗುವುದು. ಆಯ್ಕೆಗೊಂಡ ಶಿಕ್ಷಕರಿಗೆ ಪ್ರಾದೇಶಿಕ ಆಂಗ್ಲ ಭಾಷಾ ತರಬೇತಿ ಸಂಸ್ಥೆ ಮೂಲಕ 15 ದಿನಗಳ ಪ್ರವೇಶ ತರಬೇತಿ ನೀಡಲಾಗುವುದು.ಅಲ್ಲದೆ ಪ್ರತೀ ತಿಂಗಳು ಆ ಸಂಸ್ಥೆಯೊಂದಿಗೆ ವಿಡಿಯೋ ಸಂವಾದ ನಡೆಸಲಾಗುವುದು ಎಂದು ಹೇಳಿದರು.
ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಅಗತ್ಯವಿರುವ ಪಠ್ಯಪುಸ್ತಕ,ಸ್ಮಾಟರ್್ ತರಗತಿಗಳಲ್ಲಿ ಬೋಧಿಸಲು ಅನುಕೂಲವಾಗುವಂತೆ ಧ್ವನಿ ಮತ್ತು ದೃಶ್ಯವನ್ನೊಳಗೊಂಡ ಇ-ಕಂಟೆಂಟ್ಗಳನ್ನು ಡಿಎಸ್ಆರ್ಟಿ ಮೂಲಕ ಸಿದ್ಧಪಡಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 1715 ಆಂಗ್ಲಭಾಷಾ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಸಿಎಂ, ರಾಜ್ಯದ ಎಲ್ಲ ಸಕರ್ಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ ಹಾಗೂ ಭಾಷಾ ಅಲ್ಪಸಂಖ್ಯಾತ ಶಾಲೆಗಳಲ್ಲಿಯೂ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಲಾಗುತ್ತಿದೆ ಎಂದರು.
ರಾಜ್ಯದ ಎಲ್ಲ ಪಠ್ಯಕ್ರಮಗಳಲ್ಲೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಕರ್ಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪ್ರತೀ ಮಗುವೂ ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ ಎಂಬ ನೀತಿಯನ್ನು ಗುರಿಯನ್ನಾಗಿಸಲಾಗಿದೆ.ಶಿಕ್ಷಣದ ಗುಣಮಟ್ಟ ಸುಧಾರಣಾ ಕಾರ್ಯಕ್ರಮ, ತಂತ್ರಜ್ಞಾನ ಆಧಾರಿತ ಕಲಿಕೆ, ವಿದ್ಯಾಥರ್ಿಗಳಿಗೆ ಪ್ರೋ ವಿದ್ಯಾಥರ್ಿಗಳನ್ನು ಪ್ರೇರೇಪಿಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಒಂದರಿಂದ 3ನೇ ತರಗತಿಗಳಲ್ಲಿ ನಲಿ-ಕಲಿ ಪದ್ಧತಿಯನ್ನು ಅಳವಡಿಸಲಾಗಿದೆ.4 ಮತ್ತು 5ನೇ ತರಗತಿಗಳಿಗೆ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದ್ದು, ಗಣಿತ ಕಿಟ್ಗಳನ್ನು ನೀಡಲಾಗಿದೆ.ಹೀಗೆ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ಸಕರ್ಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಸಾಮಗ್ರಿ, ಕ್ರೀಡಾ ಸಾಮಗ್ರಿ, ತರಗತಿ ಪ್ರಕ್ರಿಯೆ ನಿರ್ವಹಣೆಗಾಗಿ ವಾಷರ್ಿಕ 50 ಸಾವಿರ ಸಾಲ ಅನುದಾನ ನೀಡಲಾಗುತ್ತಿದೆ. 5 ಕಿ.ಮೀ ವ್ಯಾಪ್ತಿಯಲ್ಲಿ ಪ್ರೌಢಶಾಲೆ ಲಭ್ಯವಿಲ್ಲದಿದ್ದಲ್ಲಿ 8ನೇ ತರಗತಿ ಹೊಂದಿರುವ ಹಿರಿಯ ಪ್ರಾಥಮಿಕ ಶಾಲೆಗಳನ್ನು 9 ಹಾಗೂ 10 ತರಗತಿಗಳಿಗೆ ಉನ್ನತೀಕರಿಸಲಾಗಿದೆ.
ಸಕರ್ಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಉಚಿತ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ, ಬೈಸಿಕಲ್, ಕ್ಷೀರ ಯೋಜನೆ, ಮಧ್ಯಾಹ್ನ ಬಿಸಿಯೂಟ, ಶೂ, ಸ್ಯಾಕ್ಸ್ ಇತ್ಯಾದಿ ಯೋಜನೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 