ಕಾಲೇಜುಗಳಲ್ಲಿ ಪ್ರತಿಭಟನೆಗೆ ಪೂರ್ವಾನುಮತಿ ಕಡ್ಡಾಯ: ಡಾ. ಅಶ್ವತ್ಥ ನಾರಾಯಣ
ಬೆಂಗಳೂರು, ಜ. 10 ಕಾಲೇಜುಗಳ ಕ್ಯಾಂಪಸ್ ಒಳಗಾಗಲೀ, ಹೊರಗಾಗಲಿ ಪ್ರತಿಭಟನೆ ನಡೆಸಬೇಕಾದರೆ ಪೂರ್ವಾನುಮತಿ ಪಡೆಯಲೇಬೇಕು. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ನಿಶ್ಚಿತ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಎಚ್ಚರಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಫ್ರೀ ಕಾಶ್ಮೀರ್ ಫಲಕ ಪ್ರದರ್ಶನ ಘಟನೆ ಸಂಬಂಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ನಾಲ್ಕಾರು ಸಂಘಟನೆಗಳು ಹಾಗೂ ಒಬ್ಬ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿರಬಹುದು. ಅಲ್ಲಿ ಕ್ಯಾಂಪಸ್ ಒಳಭಾಗದಲ್ಲಿ ಘಟನೆ ನಡೆದಿಲ್ಲ. ಕಾಲೇಜಿಗೆ ಏಕೆ ರಜೆ ಘೋಷಿಸಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ವಿಚಾರಿಸುತ್ತೇನೆ ಎಂದರು.
ಎಲ್ಲಾ ಜಿಲ್ಲೆಗಳ ಕೇಂದ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯುವ ಸಬಲೀಕರಣ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಬಳಿಕ ಅದನ್ನು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೂ ವಿಸ್ತರಿಸಲಾಗುತ್ತದೆ. ಪ್ರತಿ ವರ್ಷ ಕಾಲೇಜುಗಳಿಂದ ಪಾಸೌಟ್ ಆಗುತ್ತಿರುವ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳಿವೆ. ಬೇಡಿಕೆಗಿಂತ ಪೂರೈಕೆ ಕಡಿಮೆ ಇದೆ. ಸಮೂಹ ಸಂಪರ್ಕ ಕೊರತೆಯಿಂದಾಗಿ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ಸಿಗುತ್ತಿಲ್ಲ. ಮಾಹಿತಿ ಪಡೆದು ಯುವಕರನ್ನು ಸಿದ್ದಪಡಿಸುವ ಕೆಲಸವನ್ನು ಯುವ ಸಬಲೀಕರಣ ಕೇಂದ್ರಗಳ ಮೂಲಕ ಮಾಡಲಾಗುತ್ತದೆ ಎಂದರು.
ಜನವರಿ 12ರಂದು ರಾಜ್ಯಾದ್ಯಂತ ವಿವೇಕಾನಂದ ಜಯಂತಿ ಆಚರಿಸಲಾಗುತ್ತಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಒಂದು ಲಕ್ಷ ಪ್ರಥಮ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 300 ಕೋಟಿ ರೂ.ಮೌಲ್ಯದ ಹೆಚ್ ಪಿ ಮತ್ತು ಏಸರ್ ಕಂಪನಿಯ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುತ್ತದೆ. ಅಲ್ಲದೆ 21 ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳನ್ನು ಒಳಗೊಂಡ ಯುವ ಸಬಲೀಕರಣ ಕೇಂದ್ರಗಳನ್ನು ಉದ್ಘಾಟಿಸಲಾಗುತ್ತದೆ.
ದೂರದರ್ಶನದಲ್ಲಿ ಪ್ರತಿ ಭಾನುವಾರ ತಜ್ಞ ಮಾರ್ಗದರ್ಶಕರಿಂದ ಉದ್ಯೋಗ ಮಾರ್ಗದರ್ಶನ, ನಾಯಕತ್ವ ತರಬೇತಿ, ಭಾಷಾಜ್ಞಾನ ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 