‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

Presentation of the 'Karnataka Rajyotsava Award'

ಗುಲಬರ್ಗಾ  17: ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಅಮರೇಶ ಯತಗಲ್ ಅವರ ‘ಗತಾನುಶೀಲನ’(ಇತಿಹಾಸ-ಸಂಸ್ಕೃತಿ) ಕೃತಿಗೆ ಸಮಾಜ ವಿಜ್ಞಾನ ವಿಭಾಗದಲ್ಲಿ ಉತ್ತಮ ಕೃತಿಯೆಂದು ಆಯ್ಕೆ ಮಾಡಿ ಗುಲಬರ್ಗಾ ವಿಶ್ವವಿದ್ಯಾಲಯವು ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿಯು ಐದು ಸಾವಿರ ರೂಪಾಯಿಗಳ ಗೌರವಧನ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.