ಐತಿಹಾಸಿಕ ದೇವಾಲಯಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಲಕ್ಷ್ಮೇಶ್ವರದಲ್ಲಿ ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗೆ 2.40 ಕೋಟಿ ಹಿ ಸಚಿವ ಎಚ್.ಕೆ. ಪಾಟೀಲ
Preservation of historical temples is our responsibility: Minister H.K. Patil allocates Rs. 2.40 cro
ಲಕ್ಷ್ಮೇಶ್ವರ 16 :ಗದಗ ಜಿಲ್ಲೆ ಐತಿಹಾಸಿಕ ಹಾಗೂ ಸಾಂಸ್ಕೃತಿಕ ತಾಣಗಳ ಕೇಂದ್ರವಾಗಿದ್ದು, ಇಲ್ಲಿನ ಒಂದೊಂದು ಕಲ್ಲುಗಳೂ ಸಹ ಬಂಗಾರದ ಬೆಲೆಯನ್ನು ಹೊಂದಿವೆ. ಈ ಅಮೂಲ್ಯ ಪರಂಪರೆಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಗದಗ, ಪ್ರವಾಸೋದ್ಯಮ ಇಲಾಖೆ ಬೆಂಗಳೂರು ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಹಯೋಗದಲ್ಲಿ ಲಕ್ಷ್ಮೇಶ್ವರದ ಶ್ರೀ ಸೋಮೇಶ್ವರ ದೇವಸ್ಥಾನದ ಉತ್ತರ ಮಹಾದ್ವಾರದ ಸಂರಕ್ಷಣಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಈ ಭಾಗದಲ್ಲಿ ನಯಸೇನ, ದುರ್ಗಸಿಂಹ, ಚಾಮರಸ, ಅತ್ತಿಮಬ್ಬೆ, ಕುಮಾರವ್ಯಾಸ ಹಾಗೂ ಆದಿಕವಿ ಪಂಪ ಸೇರಿದಂತೆ ಅನೇಕ ಮಹನೀಯರು ತಮ್ಮ ಸಾಹಿತ್ಯ ಹಾಗೂ ಸಂಸ್ಕೃತಿಯಿಂದ ಈ ನಾಡನ್ನು ಶ್ರೀಮಂತಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಎಂ.ಎಸ್. ಸುಂಕಾಪುರ, ಕೀರ್ತಿನಾಥ ಕುರ್ತಕೋಟಿ, ಸೋಮಶೇಖರ ಇಮ್ರಾಪುರ ಹಾಗೂ ಹುಯಿಲಗೋಳ ನಾರಾಯಣರಾವ್ ಮೊದಲಾದ ಮಹಾನ್ ಸಾಹಿತಿಗಳು ನಮ್ಮ ಭಾಗದವರಾಗಿದ್ದಾರೆ ಎಂದು ಸಚಿವರು ಹೇಳಿದರು.
ಇಲ್ಲಿನ ಒಂದೊಂದು ಕಲ್ಲುಗಳೂ ಇತಿಹಾಸವನ್ನು ಹೇಳುತ್ತವೆ. ರಂಭಾಪುರಿ ಗಂಗಾಧರ ಶ್ರೀಗಳು ಈ ಭಾಗದಲ್ಲಿ ಧರ್ಮಜಾಗೃತಿ ಮೂಡಿಸಿದ ಇತಿಹಾಸವಿದೆ. ಪುಲಿಗೆರೆ ಆದಿಕವಿ ಪಂಪನ ಕಾರ್ಯಕ್ಷೇತ್ರವಾಗಿದ್ದು, ್ಣ್ಚ್ಣೃಹಿೈ್ಣ್ಕ್ತು ರಸ್ತೆ ಕೂಡ ದೊಡ್ಡ ಇತಿಹಾಸವನ್ನು ಸಾರುತ್ತದೆ ಎಂದು ತಿಳಿಸಿದರು.ಶಿರಹಟ್ಟಿ ಮತ್ತು ಮುಂಡರಗಿ ಭಾಗಗಳ ಇತಿಹಾಸದ ಕೆಲವು ಪುಟಗಳು ಮರೆಯಾಗಿರುವುದು ವಿಷಾದನೀಯ. ಸೋಮೇಶ್ವರ ದೇವಾಲಯದ ಸುತ್ತಲಿರುವ ಮನೆಗಳ ಮಾಲೀಕರು ಮೂಲ ಸ್ಥಳವನ್ನು ದೇವಾಲಯದ ಅಭಿವೃದ್ಧಿಗೆ ಬಿಡಲು ಸಹಕರಿಸಿದರೆ, ಈ ಪ್ರದೇಶವನ್ನು ಇನ್ನಷ್ಟು ಸುಂದರವಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನವನ್ನು ಪ್ರಜ್ವಲ್ ರಿತ್ತಿ ಎಂಬ ಬಾಲಕ ಸುಮಾರು ?8 ಕೋಟಿ ಮೊತ್ತದೊಂದಿಗೆ ಸರ್ಕಾರಕ್ಕೆ ಮರಳಿಸಿದುದು ನಮ್ಮ ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವರು ಉಲ್ಲೇಖಿಸಿದರು.
ಸೋಮೇಶ್ವರ ದೇವಸ್ಥಾನದ ಉತ್ತರ ಮಹಾದ್ವಾರದ ದುರಸ್ತಿ ಕಾರ್ಯದ ಜೊತೆಗೆ ಜಲನಿರೋಧಕ ಹೊದಿಕೆ ಹಾಕುವುದು, ದೇವಾಲಯದ ಮೇಲ್ಚಾವಣಿ ದುರಸ್ತಿ ಸೇರಿದಂತೆ ಒಟ್ಟು 12 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ?2.40 ಕೋಟಿ ಅನುದಾನ ಮಂಜೂರಾಗಿದೆ. ಪುನರ್ ನಿರ್ಮಾಣ ಕಾರ್ಯವನ್ನು ಗುಣಮಟ್ಟದೊಂದಿಗೆ ಅಚ್ಚುಕಟ್ಟಾಗಿ ನಡೆಸಬೇಕು. ಅಗತ್ಯವಿದ್ದಲ್ಲಿ ಸ್ಯಾಂಡ್ ಪ್ಲಾಸ್ಟರಿಂಗ್ ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಸಚಿವ ಎಚ್.ಕೆ. ಪಾಟೀಲ ಅವರು ಪ್ರವಾಸೋದ್ಯಮ ಸಚಿವರಾಗಿ ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆಡಳಿತದಲ್ಲಿ ಇನ್ನಷ್ಟು ಧಾರ್ಮಿಕ ಕ್ಷೇತ್ರಗಳು ಅಭಿವೃದ್ಧಿ ಹೊಂದಲಿ ಎಂದು ಆಶಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ, ಮಾಜಿ ಶಾಸಕರುಗಳಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಸುಜಾತಾ ದೊಡ್ಡಮನಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ, ಯುವ ಮುಖಂಡ ಆನಂದ ಗಡ್ಡದೇವರಮಠ, ಶ್ರೀ ಸೋಮೇಶ್ವರ ಭಕ್ತರ ಟ್ರಸ್ಟ್ ಅಧ್ಯಕ್ಷ ಗುರುರಾಜ ಪಾಟೀಲ ಕುಲಕರ್ಣಿ, ದಿಗಂಬರ ಪೂಜಾರ, ಕುಬೇರ್ಪ ಮಹಾಂತಶೆಟ್ಟರ, ಗುರುನಾಥ ದಾನಪ್ಪನವರ, ಸುನೀಲ ಮಹಾಂತಶೆಟ್ಟರ, ಡಾ. ಬಸವರಾಜ ಬೊಮ್ಮನಳ್ಳಿ, ಎಸ್.ಪಿ. ಬಳಿಗಾರ, ಸಿದ್ದಲಿಂಗೇಶ ಪಾಟೀಲ, ವೀರಯ್ಯ ಮಠಪತಿ, ಕೊಟ್ರೇಶ ವಿಭೂತಿ, ಸುವರ್ಣ ಕ್ಷೀರಸಾಗರ, ಎಸ್.ವಿ. ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಪ್ರಾಸ್ತಾವಿಕವಾಗಿ ಚನ್ನಪ್ಪ ಜಗಲಿ ಮಾತನಾಡಿದರು. ಗಂಗಾಧರ ಗುಡಗೇರಿ ಹಾಗೂ ಸೋಮಣ್ಣ ಕೆರಿಮನಿ ಕಾರ್ಯಕ್ರಮವನ್ನು ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 