ಭಾರತೀಯ ಸಂಸ್ಕೃತಿ-ಸಂಸ್ಕಾರ ಉಳಿಸಿ-ಬೆಳೆಸಿ
Preserve and cultivate Indian culture and tradition
ವಿಜಯಪುರ 24: “ಯತ್ರ ನಾರೇಶು ಪೂಜ್ಯಂತೇ ತತ್ರ ರಮಂತೇ ದೇವತಾ:” ಎಂಬ ಸಂಸ್ಕೃತ ಶ್ಲೋಕದಂತೆ ಎಲ್ಲಿ ಸ್ತ್ರೀಯನ್ನು ಪೂಜ್ಯನೀಯ ಮತ್ತು ಗೌರವಯುತ ಭಾವನೆಯಿಂದ ಕಾಣುತ್ತಾರೋ ಅಲ್ಲಿ ಸ್ವತ: ದೇವತೆಗಳೇ ಬಂದು ನೆಲೆಸುತ್ತಾರೆ ಎಂಬ ಪ್ರತೀತಿಯಿದೆ. ಅದಕ್ಕಾಗಿ ನಮ್ಮ ತಾಯಂದಿರು ಮಕ್ಕಳಲ್ಲಿ ಧಾರ್ಮಿಕ-ಸಾಮಾಜಿಕ, ನಮ್ಮ ಪರಂಪರೆ-ಸಂಪ್ರದಾಯ, ಆಚಾರ-ವಿಚಾರ, ಸಂಸ್ಕೃತಿ-ಸಂಸ್ಕಾರಗಳನ್ನು ಒಡಮೂಡಿಸುವ ಕಾರ್ಯ ಮಾಡಬೇಕು. ಅಂದಾಗ ಮಾತ್ರ ಮುಂದಿನ ಜನಾಂಗವು ನಮ್ಮ ಧಾರ್ಮಿಕ ಸಂಪ್ರದಾಯ-ವಿಧಿವಿಧಾನಗಳನ್ನು ಉಳಿಸಿ-ಬೆಳೆಸಲು ಸಾಧ್ಯ ಎಂದು ಮುಖ್ಯ ಅತಿಥಿ ಶ್ರೀಮತಿ. ಮಾಯಾದೇವಿ ಚೌಧರಿ ಅವರು ಸಲಹೆ ನೀಡಿದರು.
ಅವರು ನಗರದ ಅಥಣಿ ರಸ್ತೆಯಲ್ಲಿರುವ ಅಲ್-ಅಮೀನ್ ಆಸ್ಪತ್ರೆ ಎದುರಿಗೆ ಇರುವ ಎನ್.ಜಿ.ಓ ಕಾಲನಿಯಲ್ಲಿ ಜೈ ಶ್ರೀ ಆಂಜನೇಯ ದೇವಸ್ಥಾನದ 6 ನೇಯ ವರ್ಷದ ಜಾತ್ರಾ ಮಹೋತ್ಸವದಲ್ಲಿ ಗೋಮಾತೆ ಮತ್ತು ಬನ್ನಿ ಮಹಾಂಕಾಳಿ ಪೂಜೆ ಸಲ್ಲಿಸುವದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಅವರು ಮಾತನಾಡುತ್ತಾ, ಬದುಕು ಸಂಕೀರ್ಣಮಯವಾಗುತ್ತಿರುವ ಇಂದಿನ ಕಾಲದಲ್ಲಿ ಮನುಷ್ಯ ಏನೆಲ್ಲ ಗಳಿಸಿದರೂ ಮನಸ್ಸಿಗೆ ಶಾಂತಿ ಇಲ್ಲದಂತಾಗಿದೆ. ಹನುಮಂತ-ರಾಮನ ನಡುವಿನ ಗುರು-ಶಿಷ್ಯರ ಅವಿನಾವ ಸಂಬಂಧ ಮತ್ತು ದೈವಿಭಕ್ತಿಯೇ ನಮ್ಮೆಲ್ಲರಿಗೆ ಆದರ್ಶವಾಗಬೇಕು. ಇಡೀ ಜಗತ್ತಿನಲ್ಲಿಯೇ ಧಾರ್ಮಿಕ ಪರಂಪರೆ-ಆಚರಣೆ, ಸಂಪ್ರದಾಯ ಮತ್ತು ಸಂಸ್ಕೃತಿ-ಸಂಸ್ಕಾರಕ್ಕೆ ಹೆಸರುವಾಸಿಯಾದ ರಾಷ್ಟ್ರ ನಮ್ಮದು. ಸಾಂಸ್ಕೃತಿಕ ನೆಲೆವೀಡು ನಮ್ಮ ರಾಷ್ಟ್ರ. ಹಲವು ಧರ್ಮ, ಸಂಪ್ರದಾಯ, ಆಚರಣೆ, ಭಾಷೆ, ಸಂಸ್ಕೃತಿ ಬೇರೆ ಬೇರೆಯಾದರೂ ಅಖಂಡತೆ ಮತ್ತು ವಿವಿಧತೆಯಲ್ಲಿ ಏಕತೆ ಎಂಬುದನ್ನು ತೋರಿಸಿಕೊಟ್ಟ ದೇಶ ನಮ್ಮದು. ನಾವೆಲ್ಲರೂ ಇಲ್ಲಿ ನಾವೆಲ್ಲರೂ ಒಂದು ಎಂಬ ಸದ್ಭಾವದಿಂದ ಬದುಕುತ್ತಿದ್ದೇವೆ.
ಪರಸ್ಪರ ಸಹೋದರತೆ-ಭ್ರಾತೃತ್ವದೊಂದಿಗೆ ಒಂದೆಡೆ ಎಲ್ಲ ಧರ್ಮಿಯರು ಶಾಂತಿಯುತ ಜೀವನ ನಡೆಸಲು ಆಶ್ರಯ ನೀಡಿದ ಪವಿತ್ರ ದೇಶ ನಮ್ಮದಾಗಿದೆ. ಧಾರ್ಮಿಕ ಮತ್ತು ಪವಿತ್ರ ತಾಣಗಳಾದ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯ, ಧಾರ್ಮಿಕ ಸಂಪ್ರದಾಯ-ಪದ್ಧತಿ, ಪ್ರವಚನ, ಕೀರ್ತನೆ, ಭಜನೆ ಮತ್ತು ಎಲ್ಲರೂ ಸೇರಿ ಜಾತ್ರಾ ಮಹೋತ್ಸವ ಆಚರಿಸುವದರಿಂದ ನಮಗೆಲ್ಲ ಸುಖ,ಶಾಂತಿ, ಮನಸ್ಸಿಗೆ ನೆಮ್ಮದಿ ಸೊರೆಯುತ್ತದೆ ಎಂದರು. ಎನ್.ಜಿ.ಓ ಕಾಲನಿಯ ಈ ದೇವಸ್ಥಾನದಲ್ಲಿ 5 ದಿನಗಳ ಜಾತ್ರೆ ಮತ್ತು ಪ್ರತಿ ಶನಿವಾರ ಸಾಮೂಹಿಕ ಹನುಮಾನ ಚಾಲೀಸ್ ಪಠಣ, ಭಜನೆ, ಗಾಯನ, ಕೀರ್ತನೆ ಮತ್ತು ಸತ್ಸಂಗದಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವದು ವಿಜಯಪುರ ನಗರದ ಮಾದರಿ ದೇವಸ್ಥಾನವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ. ವಿದ್ಯಾ ಬಶೆಟ್ಟಿ ಇವರು ವಹಿಸಿದ್ದರು.ಸಮಾರಂಭದ ನಂತರ ಬನ್ನಿ ಮಹಾಂಕಾಳಿ ಉಡಿ ತುಂಬುವದರೊಂದಿಗೆ ಸುಮಾರು 500 ಕ್ಕೂ ಹೆಚ್ಚು ಸುಮಂಗಲೆಯರು ಉಡಿ ತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ ಭಾರತೀಯ ಸಂಸ್ಕೃತಿಯನ್ನು ಅಭಿವ್ಯಕ್ತಿಗೊಳಿಸಿದರು.
ಸವಿತಾ ಪೂಜಾರಿ ರಾಮ ಭಜನೆಯನ್ನು ಪ್ರಸ್ತುತಪಡಿಸಿದರು. ಪ್ರೊ. ಎಂ.ಎಸ್.ಖೊದ್ನಾಪೂರ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಾವಳಗಿ, ಜ್ಯೋತಿ ಕೂಟನೂರ, ಸಿದ್ದಮ್ಮ ಪಾಟೀಲ, ರೇವತಿ ಬುದ್ನಿ, ಶಾಂತಾ ಕಪಾಳಿ, ಶಕುಂತಲಾ ಅಂಕಲಗಿ, ಶೀಲಾ ದೇವನಾಯಕ, ಪ್ರೇಮಾ ಕನ್ನೂರ, ಶಾಲಿನಿ ಹೂಗಾರ, ಭಾರತಿ ಪಾಟೀಲ, ಗಿರಿಜಾ ಮಠಪತಿ, ರೇವತಿ ಬುದ್ನಿಮಠ, ಭಾರತಿ ಬಿರಾದಾರ, ಆಶಾರಾಣಿ ಕೋಷ್ಠಿ, ಅಂಬಿಕಾ ರಜಪೂತ, ಪ್ರೇಮಾ ಕ್ಷತ್ರಿ, ಇನ್ನಿತರರು ಸಹ ಉಪಸ್ಥಿತರಿದ್ದರು. ಸುತ್ತಮುತ್ತಲಿನ ಬಡಾವಣೆಯ ಎಲ್ಲ ನೂರಾರು ಮಕ್ಕಳು, ಮಹಿಳೆಯರು, ಹಿರಿಯರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 