ಕನ್ನಡವನ್ನು ಉಳಿಸಿ ಬೆಳೆಸುವದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ : ಶಾಸಕ ರಾಜುಗೌಡ ಪಾಟೀಲ

 ಕನ್ನಡವನ್ನು ಉಳಿಸಿ ಬೆಳೆಸುವದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ : ಶಾಸಕ ರಾಜುಗೌಡ ಪಾಟೀಲ Preserving and developing Kannada is the primary duty of every Kannadigas: MLA Rajugowda Patil

ಲೋಕದರ್ಶನ ವರದಿ 

ಕನ್ನಡವನ್ನು ಉಳಿಸಿ ಬೆಳೆಸುವದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ : ಶಾಸಕ ರಾಜುಗೌಡ ಪಾಟೀಲ  

ದೇವರಹಿಪ್ಪರಗಿ 02: :ಕನ್ನಡ ನಾಡು-ನುಡಿ ನಮ್ಮ ಅಸ್ಮಿತೆ. ಕನ್ನಡ ನಾಡು ಇದೊಂದು ಭೌಗೋಳಿಕ ಪ್ರದೇಶ ಮಾತ್ರವಲ್ಲ, ಸಾವಿರಾರು ವರ್ಷಗಳ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ನಿತ್ಯ ಜೀವಂತಿಕೆಯ ಪ್ರತೀಕವಾಗಿದೆ. ಅದನ್ನು ಉಳಿಸಿ ಬೆಳೆಸುವದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ” ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು. 

ಪಟ್ಟಣದ 1008 ಜಗದ್ಗುರು ಕಲ್ಯಾಣ ಮಂಟಪದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ, ತಾಲೂಕು ಆಡಳಿತ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಹಾಗೂ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಕನ್ನಡ ನಾಡಿನಲ್ಲಿ ಅನೇಕ ಕವಿಗಳು, ವಚನಕಾರರು ಮತ್ತು ಕೀರ್ತನಾಕಾರರು ಕನ್ನಡ ಕೀರ್ತಿ ಪತಾಕೆ ಜಗತ್ತಿನಾದ್ಯಂತ ಪಸರಿಸಿದ್ದಾರೆ. ಸುಮಾರು 2 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಇದುವರೆಗೆ 8 ಜ್ಞಾನಪೀಠ ಪ್ರಶಸ್ತಿಗಳು ದೊರಕಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.ಬೇರೆ ಭಾಷೆಗಳನ್ನು ಗೌರವಿಸಬೇಕು ಹಾಗೂ ನಮ್ಮನ್ನು ನಾವು ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ತಾಂತ್ರಿಕವಾಗಿ, ಸಾಹಿತ್ಯಾತ್ಮಕವಾಗಿ, ಆಡಳಿತಾತ್ಮಕವಾಗಿ, ಹೀಗೆ ಮುಂತಾದ ಕ್ಷೇತ್ರಗಳಲ್ಲಿ ಕನ್ನಡ ನಾಡನುಡಿಯ ಉಳಿವಿಗಾಗಿ ತೊಡಗಿಸಿಕೊಳ್ಳಬೇಕು. ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ನಾವೆಲ್ಲರೂ ಪ್ರಮಾಣ ಮಾಡೋಣ ಎಂದರು. ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷೆ ಬೋರಮ್ಮ ದೇವಣಗಾಂವ, ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ, ಸರ್ವ ಸದಸ್ಯರು, ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.