ಸ್ವಯಂ ಸೇವಕ ಸಂಜಯಕುಮಾರರಿಗೆ ರಾಷ್ಟ್ರಪತಿ ಪ್ರಶಸ್ತಿ
President's Award for Volunteer Sanjay Kumar
ಸ್ವಯಂ ಸೇವಕ ಸಂಜಯಕುಮಾರರಿಗೆ ರಾಷ್ಟ್ರಪತಿ ಪ್ರಶಸ್ತಿ
ವಿಜಯಪುರ 07: ಭಾರತ ಸರ್ಕಾರದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯ ಕೊಡಮಾಡುವ ರಾಷ್ಟ್ರದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾಗಿರುವ ಮೈ ಭಾರತ ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರಪತಿ ಪ್ರಶಸ್ತಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಸ್ವಯಂ ಸೇವಕ ಹಾಗೂ ಯುವ ಚಿಂತಕ ಸಂಜಯಕುಮಾರ ಅವರಿಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರಶಸ್ತಿ ಅವರು ಪ್ರಧಾನ ಮಾಡಿ ಗೌರವಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಅಪೂರ್ವ ಕಾರ್ಯಕ್ರಮದಲ್ಲಿ ಸಂಜಯಕುಮಾರ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೇಂದ್ರ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಮನ್ಸೂಖ್ ಮಾಂಡವೀಯ, ಸಂಸದೆ ರಕ್ಷಾ ಖಡಸೆ, ರಾಷ್ಟ್ರೀಯ ಸೇವಾ ಯೋಜನೆ ನಿರ್ದೇಶಕಿ ವಂದಿತಾ ಶರ್ಮಾ, ಯುವ ಸಬಲೀಕರಣ ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ನಿತೇಶಕುಮಾರ ಮಿಶ್ರಾ ಈ ವೇಳೆ ಉಪಸ್ಥಿತರಿದ್ದರು.ಪ್ರಶಸ್ತಿ ಪ್ರಧಾನದ ವೇಳೆ ಸಂಜಯಕುಮಾರ ಅವರ ಕೈಗೊಂಡ ರಕ್ತದಾನ, ಸಾವಿರಾರು ಸಸಿಗಳನ್ನು ನೆಡುವ ಕಾರ್ಯ, ಕೇಂದ್ರ ಪುರಸ್ಕೃತ ಯೋಜನೆಗಳ ಜಾಗೃತಿ ಕಾರ್ಯಗಳ ಕುರಿತು ನಿರೂಪಕರು ವಿವರಿಸಿದರು. ನಂತರ ರಾಷ್ಟ್ರಪತಿಗಳು ಸಂಜಯಕುಮಾರ ಅವರಿಗೆ ಪದಕ ಪ್ರಧಾನ ಮಾಡಿ ಅಭಿನಂದಿಸಿದರು.ಸಂಜಯಕುಮಾರ ಅವರ ತಂದೆ, ತಾಯಿ ಈ ಅಪೂರ್ವ ಕ್ಷಣಗಳಿಗೆ ಸಾಕ್ಷಿ ಯಾದರು. ಪ್ರಶಸ್ತಿ ಸ್ವೀಕರಿಸಿದ ನಂತರ ಅನಿಸಿಕೆ ಹಂಚಿಕೊಂಡ ಸಂಜಯಕುಮಾರ ಬಿರಾದಾರ, ಇದು ನನ್ನ ಜೀವನದ ಅವಿಸ್ಮರಣೀಯ ಕ್ಷಣ, ರಾಷ್ಟ್ರಪತಿಗಳ ಅಮೃತ ಹಸ್ತದಿಂದ ಪ್ರಶಸ್ತಿ ಪಡೆಯುವ ನನ್ನ ಕನಸು ಈಡೇರಿದೆ, ಇದಕ್ಕೆಲ್ಲ ನನ್ನ ತಂದೆ, ತಾಯಿ, ಗುರುವೃಂದ, ಸ್ನೇಹಬಳಗದ ಹಾರೈಕೆಯೇ ಕಾರಣ, ಈ ಪ್ರಶಸ್ತಿ ನನಗೆ ಇನ್ನಷ್ಟೂ ಜವಾಬ್ದಾರಿ ಹೆಚ್ಚಿಸಿದೆ, ಇನ್ನೂ ಪರಿಣಾಮಕಾರಿಯಾಗಿ ಸೇವೆ ಮಾಡುವ ಹುಮ್ಮಸ್ಸು ಹೆಚ್ಚಿಸಿದೆ, ಸೇವೆಯಲ್ಲಿ ಸಂತೋಷ ಕಾಣೋಣ ಎಂದರು.
ಮಹಾರಾಷ್ಟ್ರ, ತಮಿಳುನಾಡು, ಗೋವಾ, ಕೇರಳ ಸೇರಿದಂತೆ ದಕ್ಷಿಣ ಭಾರತದಿಂದ ಈ ಪ್ರಶಸ್ತಿಗೆ ಸಂಜಯಕುಮಾರ ಏಕೈಕ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಸಂಜಯಕುಮಾರ ಬಿರಾದಾರ ಈ ಹಿಂದೆ ಪ್ರತಿಷ್ಠಿತ ಕಾಮನ್‌ವೆಲ್ತ್ ಯೂಥ್ ಕ್ಲೈಮೇಟ್ ಚೇಂಜ್ ನೆಟವರ್ಕ್ ಇಂಡಿಯಾದ ಯೂಥ್ ಲೀಡರ್ ಆಗಿ ನೇಮಕಗೊಂಡಿದ್ದರು. ಮೂಲತಃ ವಿಜಯಪುರ ಜಿಲ್ಲೆಯ ಪುಟ್ಟ ಗ್ರಾಮ ತೆಲಗಿಯರವಾದ ಸಂಜಯಕುಮಾರ ರಾಷ್ಟ್ರದ ಮಟ್ಟದಲ್ಲಿ ಸಾಮಾಜಿಕ ಸೇವೆ ಗುರುತಿಸಿಕೊಂಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 