ಪ್ರಯಾಗ್ ರಾಜ್ 10: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಸೋಮವಾರ ಭೇಟಿ ನೀಡಿ ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ಇಂದು ಮುಂಜಾನೆ ಪ್ರಯಾಗ್‌ರಾಜ್‌ಗೆ ಆಗಮಿಸಿದ ರಾಷ್ಟ್ರಪತಿಗಳನ್ನು ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು.
ಪವಿತ್ರ ಸ್ನಾನಕ್ಕೂ ಮೊದಲು ತ್ರಿವೇಣಿ ಸಂಗಮದಲ್ಲಿರುವ ಹಕ್ಕಿಗಳಿಗೆ ಆಹಾರ ನೀಡಿದರು.