ಬೆಂಗಳೂರು 01: ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ
ರಾಮನಾಥ ಕೋವಿಂದ ಸೇರಿ ಅನೇಕ ಗಣ್ಯರು ಶುಭಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ
ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ
ಪ್ರತಿಭಾವಂತರಿಗೆ ನೆಲೆ ನೀಡಿದೆ. ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’
ಎಂದು ಬರೆದುಕೊಂಡಿದ್ದಾರೆ.
ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ
ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ
ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
— Narendra Modi (@narendramodi)
ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು
ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ
— ರಾಷ್ಟ್ರಪತಿ ಕೊವಿಂದ್.
—
President of India (@rashtrapatibhvn)
ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅನೇಕ ರಾಜಕೀಯ
ನಾಯಕರು ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
— CM of Karnataka (@CMofKarnataka)
ಕನ್ನಡ ಎಂದರೆ
ಬರೀ ಭಾಷೆ ಅಲ್ಲ,
ಅದು ಬದುಕು,
ಅದು ಸಂಸ್ಕೃತಿ,
ಅದು ಪರಂಪರೆ.
ಕನ್ನಡವನ್ನು ಪ್ರೀತಿಸೋಣ.
ನಾಡಬಾಂಧವರೆಲ್ಲರಿಗೂ
ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆಗಳು.
— Siddaramaiah (@siddaramaiah)