ಬ್ರೆಜಿಲ್ ಅಧ್ಯಕ್ಷ, ಗಣರಾಜ್ಯೋತ್ಸದ ಮುಖ್ಯ ಅತಿಥಿ
ಬ್ರೆಸಿಲಿಯಾ , ನವೆಂಬರ್ 14 : ಮುಂದಿನ ವರ್ಷ ಜನವರಿ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸದ ಮುಖ್ಯ ಅತಿಥಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ಅವರನ್ನು ಇಂದು ಒಪಚಾರಿಕವಾಗಿ ಆಹ್ವಾನಿಸಿದ್ದಾರೆ.
ಬುಧವಾರ ತಡರಾತ್ರಿ ಬ್ರೆಸಿಲಿಯಾದಲ್ಲಿ ಜರುಗಿದ ದ್ವಿಪಕ್ಷೀಯ ಮಾತುಕತೆಯಲ್ಲಿ ಮೋದಿ ಅವರು ಬೋಲ್ಸನಾರೊಗೆ ಆಹ್ವಾನ ನೀಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬ್ರೆಜಿಲ್ ಅಧ್ಯಕ್ಷರು ಮೋದಿಯವರ ಆಹ್ವಾನವನ್ನುಒಪ್ಪಿದ್ದಾರೆ . ಬೋಲ್ಸೊನಾರೊ ಆಯೋಜಿಸಿರುವ 11 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಬ್ರೆಸಿಲಿಯಾ ಪ್ರವಾಸದಲ್ಲಿದ್ದಾರೆ.
ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬ್ರೆಜಿಲ್ ಅಧ್ಯಕ್ಷರ ನವದೆಹಲಿ ಭೇಟಿ ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂಬ ವಿಶ್ವಾಸವನ್ನು ಉಭಯ ನಾಯಕರು ವ್ಯಕ್ತಪಡಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 