ಫಿಲಿಪ್ಪೀನ್ಸ್, ಜಪಾನ್ ಪ್ರವಾಸ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್
ನವದೆಹಲಿ, ಅ 17 ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒಂದು ವಾರ ಫಿಲಿಪ್ಪೀನ್ಸ್ ಮತ್ತು ಜಪಾನ್ ಪ್ರವಾಸಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕೋವಿಂದ್ ಅವರು ಜಪಾನ್ ದೊರೆ ನರುಹಿತೋ ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಫಿಲಿಪ್ಪೀನ್ಸ್ ಅಧ್ಯಕ್ಷ ರೋಡ್ರಿಗೋ ರೋಆ ಡುಟೆರ್ಟ್ ಆಹ್ವಾನದ ಮೇರೆಗೆ ಕೋವಿಂದ್ ಫಿಲಿಪ್ಪೀನ್ಸ್ ಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಉಭಯ ರಾಷ್ಟ್ರಗಳ ನಡುವಣ 70 ವರ್ಷಗಳ ರಾಜತಾಂತ್ರಿಕ ಸಂಬಂಧದ ಸ್ಮರಣಾರ್ಥ ಈ ಭೇಟಿ ನಡೆಯಲಿದ್ದು ಮನಿಲಾದಲ್ಲಿ ಕೋವಿಂದ್ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ, ಅಲ್ಲದೇ ಸಮುದಾಯ ಚಟುವಟಿಕೆಗಳಲ್ಲೂ ಭಾಗಿಯಾಗಲಿದ್ದಾರೆ. ಪ್ರವಾಸದ ಎರಡನೇ ಚರಣದಲ್ಲಿ ಅವರು ಅ 21 ರಂದು ಜಪಾನ್ ಗೆ ಭೇಟಿ ನೀಡಲಿದ್ದು ಜಪಾನ್ ದೊರೆಯ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಏರ್ಪಡಿಸಿರುವ ಔತಣ ಕೂಟದಲ್ಲೂ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಬೌದ್ಧ ದೇವಾಲಯಕ್ಕೆ ಭೇಟಿ ನೀಡಿ ಗಯಾದಲ್ಲಿನ ಪವಿತ್ರ ಬೋಧಿ ವೃಕ್ಷದ ಸಸ್ಯವನ್ನೂ ಕೂಡ ನೆಡಲಿದ್ದಾರೆ. ಈ ಮೂಲಕ ಬೌದ್ಧ ಧರ್ಮದ ನೆಲೆಯಲ್ಲಿ ಭಾರತ ಮತ್ತು ಜಪಾನ್ ನಡುವಣ ಐತಿಹಾಸಿಕ ಮತ್ತು ಸಾಂಸ್ಕೃತಿಕ ಬಂಧಗಳ ಮೇಲೆ ಬೆಳಕು ಚೆಲ್ಲಲಿದ್ದಾರೆ. ಉಭಯ ದೇಶಗಳ ನಡುವಣ ಸಾಂಪ್ರದಾಯಿಕ ಸ್ನೇಹ ಮತ್ತು ಬಾಂಧವ್ಯದ ಆಧಾರದ ಮೇಲಿನ ದ್ವಿಪಕ್ಷೀಯ ಸಹಕಾರವನ್ನು ಬಲಗೊಳಿಸುವ ಭಾರತದ ಬದ್ಧತೆಯನ್ನು ಈ ಭೇಟಿ ಪುನಃ ಎತ್ತಿ ಹಿಡಿಯಲಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 