ನವದೆಹಲಿ, ಮಾ.30, ಅನಿರ್ದಿಷ್ಟಾವಧಿವರೆಗೆ ರಾಜ್ಯಸಭೆಯನ್ನು ಮುಂದೂಡಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ.ಮಾರ್ಚ್ 23ರಂದು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದನ್ನು ರಾಷ್ಟ್ರಪತಿ ಮಾರ್ಚ್ 29 ರಂದು ಅನುಮೋದನೆ ನೀಡಿದ್ದಾರೆ ಎಂದು ರಾಜ್ಯಸಭಾ ಸಚಿವಾಲಯದ ಪ್ರಕಟಣೆ ಸೋಮವಾರ ತಿಳಿಸಿದೆ.ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮೇಲ್ಮನೆ ಕಲಾಪವನ್ನು ವೇಳಾಪಟ್ಟಿಗಿಂತ ಮುಂಚಿತವಾಗಿ ಮುಂದೂಡಲಾಗಿತ್ತು.