ನವದೆಹಲಿ, ನ ೨೯-ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನವೆಂಬರ್ ೩೦ ರಿಂದ ಡಿಸೆಂಬರ್ ೧ ರವರೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಅಧಿಕೃತ ಪ್ರಕಟಣೆಯ ಪ್ರಕಾರ, ಕಾನ್ಪುರದ ಪಿಎಸ್‌ಐಟಿ ಉನ್ನತ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿನ ಇತ್ತೀಚಿನ ಪ್ರಗತಿಯ ಕುರಿತ ಸಮಾವೇಶವನ್ನು ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ.
ಅದೇ ದಿನ ಅವರು ಕಾನ್ಪುರದ ಛತ್ರಪತಿ ಶಾಹು ಜಿ ಮಹಾರಾಜ್ ವಿಶ್ವವಿದ್ಯಾಲಯದ ಮೊದಲ ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿಯವರ ಭೇಟಿ ಸಂದರ್ಭದಲ್ಲಿ ಕಾನ್ಪುರ ನಗರ ನಿಗಮ್ ಅವರಿಂದ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ