ಪತ್ರಿಕಾ ದಿನಾಚರಣೆ, ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
Press Day Celebration and Induction Ceremony of New Office Bearers
ಲೋಕದರ್ಶನ ವರದಿ
ಮೂಡಲಗಿ, ಜು.22: ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿದ್ದು, ಸತ್ಯ ಹಾಗೂ ನಿಷ್ಪಕ್ಷಪಾತ ಸುದ್ದಿಗಳ ಮೂಲಕ ಸಮಾಜಮುಖಿ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಹೇಳಿದರು. ಪಟ್ಟಣದ ಶ್ರೀ ಸಾಯಿ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮೂಡಲಗಿ ತಾಲ್ಲೂಕು ಘಟಕ ಹಾಗೂ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೋದ್ಯಮದಲ್ಲಿ ಹಲವು ಬದಲಾವಣೆಗಳಾಗಿದ್ದರೂ ಪತ್ರಿಕೆಗಳ ಮಹತ್ವ ಕಡಿಮೆಯಾಗಿಲ್ಲ. ಪತ್ರಕರ್ತರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜೊತೆಗೆ ಸಮಾಜಮುಖಿ ಮೌಲ್ಯಗಳನ್ನು ಬೆಳೆಸಬೇಕು ಎಂದು ಅವರು ಹೇಳಿದರು. ಗ್ರಾಮೀಣ ಭಾಗದ ಪತ್ರಕರ್ತರಿಗೆ ಬಸ್ ಪಾಸ್, ವಿಮೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಸಂಘ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ನೂತನ ಪದಾಧಿಕಾರಿಗಳು ಸಂಘವನ್ನು ಇನ್ನಷ್ಟು ಬಲಪಡಿಸಿ ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕು ಎಂದು ಕರೆ ನೀಡಿದರು. ಸಿಪಿಐ ಶ್ರೀಶೈಲ ಬ್ಯಾಕೂಡ ಮಾತನಾಡಿ, ಪತ್ರಕರ್ತರು ಸಮಾಜದ ಅಭಿವೃದ್ಧಿ ಮತ್ತು ಜನಜಾಗೃತಿಗೆ ಪೂರಕವಾದ ಸುದ್ದಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಶ್ರೀ ಸಾಯಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪುಲಕೇಶ ಸೋನವಾಲ್ಕರ್ ಪತ್ರಕರ್ತರ ಸಂಘಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮೂಡಲಗಿ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿದರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಿರಿಯ ಪತ್ರಕರ್ತರು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಪತ್ರಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 