ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ
Press Day and Award Presentation Ceremony for Achievers Tomorrow
ಬಾಗಲಕೋಟೆ 04 : ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾ ಘಟಕ, ಬಾಗಲಕೋಟೆ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಗಸ್ಟ್ 5ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಪಿಎಸ್ಸಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾ ಅಧ್ಯಕ್ಷ ಡಾ. ಸೈಯದ್ ಎಚ್. ನದಾಫ್ (ಶಿಲೇದಾರ) ತಿಳಿಸಿದ್ದಾರೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮೀಜಿ ವಹಿಸಲಿದ್ದಾರೆ. ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಪ್ರವೀಣಗೌಡ ಪಾಟೀಲ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಉಪಾಧ್ಯಕ್ಷ ಹಲಗಿ ಸುರೇಶ್, ರಾಜ್ಯ ಕಾರ್ಯದರ್ಶಿ ಬಿಚ್ಚುಗತ್ತಿ ಖಾಜಾಹುಸೇನ್, ತಹಶೀಲ್ದಾರ್ ವಿನೋದ ಹತ್ತಳ್ಳಿ, ಸಿಪಿಐ ಹಣಮಂತ ಸಣಮನಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸಿದ್ದು ಸಾರಾವರಿ, ಡಿಎಸ್ಎಸ್ ಮುಖಂಡ ಪಡಿಯಪ್ಪ ಕಳ್ಳಿಮನಿ, ಮಾಜಿ ಸದಸ್ಯ ಪ.ಪಂ. ಸಿದ್ದು ಮಾದರ, ಬಾಪೂಜಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮುತ್ತು ವಸ್ತ್ರದ, ವಿಜಯ ಕರ್ನಾಟಕ ಪತ್ರಕರ್ತ ಪ್ರಕಾಶ ಸುಣಗಾರ, ಕರ್ನಾಟಕ ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಹೆಚ್.ಜಿ. ರಮೇಶ್,
ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ. ಡಿ.ಎಂ. ವಾಲೀಕಾರ, ತಾಪಂ ಇಒ ಶ್ರೀನಿವಾಸ ಪಾಟೀಲ, ಬಿಇಒ ಆರ್.ಎಸ್. ಆದಾಪೂರ, ಅಹಿಂದ ತಾಲೂಕು ಅಧ್ಯಕ್ಷ ಶಿವಪ್ಪ ಗಾಳಿ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬುಷಾಮ ಖಾಜಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಠ್ಠಲ ಯತ್ನಟ್ಟಿ, ಗಲಗಲಿ ಗಾಲವ ಆಸ್ಪತ್ರೆಯ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಹಳ್ಳೂರ ಹಾಗೂ ಅಯೋಧ್ಯಾ ಸೌಹಾರ್ದ ಸಹಕಾರ ಸಂಘದ ಉಪಾಧ್ಯಕ್ಷ ಅರವಿಂದ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 