‘ಪತ್ರಿಕಾ ದಿನಾಚರಣೆ ಎರಡು ದಿನಗಳ ಕಾರ್ಯಾಗಾರ
Press Day celebration: Two-day workshop
ವಿಜಯಪುರ 04: ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ ಎಂದು ಹಿರಿಯ ಪತ್ರಕರ್ತ ಜಿ.ಎಸ್.ಕಮತರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮಲ್ಲಪ್ಪ ರಾಮಪ್ಪ ಮಾನಕರ ದತ್ತಿನಿಧಿ ಉಪನ್ಯಾಸದ ಅಡಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಪತ್ರಿಕಾ ದಿನಾಚರಣೆ ಹಾಗೂ ದಿನಪತ್ರಿಕೆ ಪುಟವಿನ್ಯಾಸ ತಂತ್ರಗಳು’ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಪುಟ ವಿನ್ಯಾಸ ಎನ್ನುವುದು ಎಲ್ಲಾ ಪತ್ರಿಕೆಗಳಿಗೂ ಅನ್ವಯವಾಗುತ್ತದೆ. ಬದುಕು ತಂತ್ರಗಾರಿಕೆಯಿಂದ ಕೂಡಿದಾಗ, ಅದರ ಜೊತೆಗೆ ಕಲಿಯುವುದು ಅನಿವಾರ್ಯವಾಗುತ್ತದೆ. ಕಲಿತ ವಿದ್ಯೆ ಎಂದಿಗೂ ವ್ಯರ್ಥವಾಗುವುದಿಲ್ಲ. ಉತ್ತಮ ಪತ್ರಕರ್ತನಾಗಲು ಭಾಷಾ ನೈಪುಣ್ಯತೆ, ಶಬ್ದಗಳ ಸರಿಯಾದ ಬಳಕೆ, ಬಹುಭಾಷಾ ಜ್ಞಾನ ಅಗತ್ಯ. ಇಂದು ಪತ್ರಿಕೋದ್ಯಮವು ಹಲವಾರು ನೀರೀಕ್ಷೆಗಳನ್ನು ಹೊಂದಿದೆ. ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅವಶ್ಯಕತೆ ಇದೆ ಎಂದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಪ್ರಜಾವಾಣಿಯ ಗ್ರಾಫಿಕ್ ಡಿಸೈನರ್ ಶಶಿಕಿರಣ ದೇಸಾಯಿ ಮಾತನಾಡಿ, ನಿಮ್ಮ ಕಾರ್ಯಕ್ಷಮತೆ ಹಾಗೂ ಸಾಮರ್ಥ್ಯದಿಂದ ಪತ್ರಿಕೋದ್ಯಮದ ಪುಟ ವಿನ್ಯಾಸ ಕ್ಷೇತ್ರದಲ್ಲಿ ಹೊಸತನವನ್ನು ಸಾಧಿಸಬಹುದು. ಇಂದಿನ ದಿನಗಳಲ್ಲಿ ನಾವೆಲ್ಲರೂ ಬೆರಳ ತುದಿಯಲ್ಲಿ ಡಿಸೈನ್ ಮಾಡಲು ಶಕ್ತರಾಗಿದ್ದೇವೆ. ಹೊಸ ತಂತ್ರಜ್ಞಾನಗಳ ಬಳಕೆಯಿಂದ ಪುಟ ವಿನ್ಯಾಸವನ್ನು ಹೆಚ್ಚು ಕ್ರಿಯಾಶೀಲವನ್ನಾಗಿ ರೂಪಿಸಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಬಾಗಲಕೋಟೆಯ ಫೋಟೋಗ್ರಾಫರ್ ಸಂಗಮೇಶ ಬಡಿಗೇರ್ ಮಾತನಾಡಿ, ಪತ್ರಿಕೋದ್ಯಮ ಕೇವಲ ಕಾರ್ಯಕ್ರಮ ಹಾಗೂ ರಾಜಕೀಯ ಸುದ್ದಿಗಳ ರಿಪೋಟಿಂರ್ಗ್ ಮಾತ್ರವಲ್ಲ. ಛಾಯಾಚಿತ್ರ ಪತ್ರಿಕೋದ್ಯಮದಲ್ಲಿಯೂ ಸಾಕಷ್ಟು ಅವಕಾಶಗಳಿವೆ. ವಿಭಿನ್ನ ದೃಷ್ಟಿಕೋನದಲ್ಲಿ ತೆಗೆದ ಛಾಯಾಚಿತ್ರಗಳ ಮೂಲಕ ಪತ್ರಿಕೋದ್ಯಮದಲ್ಲಿ ನಿಮ್ಮದೇ ಆದ ಛಾಪು ಮೂಡಿಸಬಹುದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, ತಂತ್ರಜ್ಞಾನವು ಒಂದು ಕಡೆ ಸವಾಲುಗಳನ್ನೂ, ಇನ್ನೊಂದೆಡೆ ಹೊಸ ಅವಕಾಶಗಳನ್ನೂ ನೀಡುತ್ತಿದೆ. ಕೃತಕ ಬುದ್ಧಿಮತ್ತೆಯನ್ನು ಸರಿಯಾಗಿ ಬಳಸಿಕೊಂಡು ವೃತ್ತಿಜೀವನ ರೂಪಿಸಿಕೊಳ್ಳಬೇಕು. ತಂತ್ರಜ್ಞಾನ ನಿರಂತರವಾಗಿ ಬದಲಾಗುತ್ತಿರುವ ಸಂದರ್ಭದಲ್ಲಿ, ಅಧ್ಯಯನ ಶೀಲತೆಯಿಂದಲೇ ಯಶಸ್ಸು ಸಾಧಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಶೋಧನಾ ವಿದ್ಯಾರ್ಥಿನಿಯರಾದ ಫಿಲೋಮೀನಾ ಸ್ವಾಗತಿಸಿದರು. ಜಯಶ್ರೀ ತಳವಾರ ಅತಿಥಿಗಳನ್ನು ಪರಿಚಯಿಸಿದರು. ಸುಷ್ಮಾ ಪವಾರ ನಿರೂಪಿಸಿದರು. ಪವಿತ್ರಾ ಕಂಬಾರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 