ಮಾನಕರ ದತ್ತಿನಿಧಿ ಉಪನ್ಯಾಸ ಅಡಿಯಲ್ಲಿ ಪತ್ರಿಕಾ ದಿನಾಚರಣೆ
Press Day under Manakara Dattinidhi Lecture
ವಿಜಯಪುರ 03 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಲ್ಲಪ್ಪ ರಾಮಪ್ಪ ಮಾನಕರ ದತ್ತಿನಿಧಿ ಉಪನ್ಯಾಸ ಅಡಿಯಲ್ಲಿ ಪತ್ರಿಕಾ ದಿನಾಚರಣೆ ಹಾಗೂ ‘ದಿನಪತ್ರಿಕೆ ಪುಟವಿನ್ಯಾಸ ತಂತ್ರಗಳು’ ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇದೇ ದಿ. 4 ಮತ್ತು 5 ರಂದು ಪ್ರತಿಕೋದ್ಯಮ ವಿಭಾಗದ ಉಪನ್ಯಾಸ ಕೊಠಡಿಯಲ್ಲಿ ಆಯೋಜಿಸಲಾಗಿದೆ.
ನಾಳೆ ಬೆಳಗ್ಗೆ 11:00 ಗಂಟೆಗೆ ಕಾರ್ಯಕ್ರಮವನ್ನು ವಿಜಯಪುರದ ಹಿರಿಯ ಪತ್ರಕರ್ತ ಜಿ.ಎಸ್.ಕಮತರ ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಪ್ರಜಾವಾಣಿ ದಿನಪತ್ರಿಕೆಯ ಗ್ರಾಫಿಕ್ ಡಿಸೈನರ್ ಶಶಿಕಿರಣ ದೇಸಾಯಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದ ವಿವಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 