ಪತ್ರಿಕಾ ಪ್ರಕಟಣೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
Press Release: Free Health Check-up Camp Successful
ಯಮಕನಮರಡಿ 27 : ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಪೊರಸೈಟ್ ಫೌಂಡೇಶನ್ ಹಾಗೂ ಐ ಐ ಟಿ ನವದೆಹಲಿ ಇವರ ಸಂಯುಕ್ತ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಚಿಲಭಾವಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಆರೋಗ್ಯ ಸಂರಕ್ಷಣೆ ಹಾಗೂ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಯತಿರಾಜ್ ದೇಶಪಾಂಡೆ ಮಾತನಾಡಿ ಆರೋಗ್ಯಕರ ಜೀವನಶೈಲಿ, ಪೌಷ್ಟಿಕ ಆಹಾರದ ಮಹತ್ವ, ತಾಯಿ-ಮಗು ಆರೋಗ್ಯ, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಕುರಿತು ಜಾಗೃತಿ ನೀಡಿದರು.
ಮಹಿಳಾ ಕಲ್ಯಾಣ ಸಂಸ್ಥೆಯ ಯೋಜನಾ ಸಂಯೋಜಕರಾದ ಸುರೇಖಾ ಪಾಟೀಲ ಮಾತನಾಡಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಆರೋಗ್ಯ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಇಂತಹ ಆರೋಗ್ಯ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಶಿಬಿರದಲ್ಲಿ ಗ್ರಾಮಸ್ಥರಿಗೆ ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ, ಆಯುಷಮಾನ್ ಭಾರತ ಆರೋಗ್ಯ ಕಾರ್ಡ ನೋಂದಣಿ, ಇ- ಶ್ರಮ ಕಾರ್ಡ ನೋಂದಣಿ ಸೌಲಭ್ಯಗಳನ್ನು ಒದಗಿಸಲಾಯಿತು.
ಶಿಬಿರದಲ್ಲಿ 133 ಫಲಾನುಭವಿಗಳು ಆಯುಷ್ಮಾನ್ ಭಾರತ ಕಾರ್ಡ್ ಹಾಗೂ ಇ ಶ್ರಮ ಕಾರ್ಡಗಳನ್ನು ಪಡೆದುಕೊಂಡು ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಅಭಯ ಸಾರಥಿ ಯೋಜನೆಯ ಯೋಗೇಶ್ ಜೋಶಿ, ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಚಾರ್ಯ ಕಿರಣ್ ಎಂ ಚೌಗಲಾ,ಚಿಲಭಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎನ್ ಎಂ ದುರಡುಂಡಿ, ಶಿಕ್ಷಕರಾದ ಮಂಜುನಾಥ ಉಪಸ್ತಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 