ಯುವ ನಿಧಿ ಯೋಜನೆ ಕುರಿತು ಪತ್ರಿಕಾ ಪ್ರಕಟಣೆ
Press Release regarding the Yuva Nidhi Scheme
ಲೋಕದರ್ಶನ ವರದಿ
ಗದಗ, ಆ. 6: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಯುವ ನಿಧಿ ಯೋಜನೆ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಪ್ರಚಲಿತ ಹಾಗೂ ದೈನಂದಿನ ಪತ್ರಿಕೆಗಳಲ್ಲಿ ಉಚಿತವಾಗಿ ಪ್ರಕಟಿಸುವ ಮೂಲಕ ಯೋಜನೆಯ ಕುರಿತು ವ್ಯಾಪಕ ಪ್ರಚಾರಕ್ಕೆ ಸಹಕರಿಸುವಂತೆ ಕೋರಲಾಗಿದೆ.
ಗದಗ ಜಿಲ್ಲೆಯ ಗದಗ ತಾಲೂಕಿನ ಅಂಜುಮನ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆ. 6ರಂದು ಡಿಪ್ಲೊಮಾ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವ ನಿಧಿ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಯುವ ನಿಧಿ ಯೋಜನೆಯ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೂಕ್ತ ಮಾರ್ಗದರ್ಶನ ನೀಡಲಾಯಿತು. ಯೋಜನೆಯ ಅರ್ಜಿ ಸಲ್ಲಿಕೆ, ಅರ್ಹತೆ ಹಾಗೂ ಲಭ್ಯವಿರುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಯುವ ನಿಧಿ ಯೋಜನೆಯಡಿ ಕರ್ನಾಟಕದ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪಡೆದವರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಪದವೀಧರರಿಗೆ ಪ್ರತಿ ತಿಂಗಳು ?3,000 ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ?1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
2023ರಿಂದ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರುವ ಹಾಗೂ ಶಿಕ್ಷಣ ಮುಗಿದ ನಂತರ ಕನಿಷ್ಠ ಆರು ತಿಂಗಳ ಕಾಲ ಉದ್ಯೋಗವಿಲ್ಲದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯಡಿ ಗರಿಷ್ಠ ಎರಡು ವರ್ಷಗಳವರೆಗೆ ಭತ್ಯೆ ನೀಡಲಾಗುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 