ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮ: ಶ್ರೀರಾಮುಲು

ಮೈಸೂರು, ಫೆ.3  :      ಕೊರೋನೂ ವೈರಸ್ ಹರಡದಂತೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ರಾಜ್ಯಕ್ಕೆ ವಿದೇಶದಿಂದ ಬಂದ 44 ಮಂದಿ ಪ್ರವಾಸಿಗರ ರಕ್ತ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 29 ಮಂದಿಯ ರಕ್ತದಲ್ಲಿ ಕೆರೋನ್ ಶಂಕೆ ಇಲ್ಲ ಎಂಬ ವರದಿ ಬಂದಿದೆ. ಉಳಿದವರ ರಕ್ತ ಪರೀಕ್ಷೆ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕು ಹರಡದಂತೆ ರಾಜ್ಯದಲ್ಲಿ ಮುಂಜಾಗ್ರತಾ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ‌.  ಹತ್ತು ಹಾಸಿಗೆಯುಳ್ಳ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ. ಇದುವರೆಗೂ ರಾಜ್ಯದಲ್ಲಿ ಒಂದು ಕೆರೋನೂ ಪ್ರಕರಣ ದಾಖಲಾಗಿಲ್ಲ.  ಇದಕ್ಕೆ ಔಷಧಿಯನ್ನು ಹೊರ ದೇಶದಲ್ಲಿ ತರಿಸಲು ಸಿದ್ಧರಿದ್ದೇವೆ‌.  ರೋಗಿಗಳ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ಸಿದ್ಧವಿದೆ‌. ಈ ರೋಗಕ್ಕೆ ಆಯುರ್ವೇದದಲ್ಲಿ ಔಷಧವಿದೆ. ವಿಮಾನ ನಿಲ್ದಾಣಗಳಿಗೆ ಚೀನಾದಿಂದ ಬರುವ ಪ್ರವಾಸಿಗರಿಗೆ ಸ್ಪ್ರೇ ಮಾಡಿ  ಬರಮಾಡಿಕೊಳ್ಳಲಾಗುತ್ತಿದೆ. ಈ ವೈರಸ್ ಬಗ್ಗೆ ಯಾರು ಆತಂಕ ಪಡಬೇಕಾಗಿಲ್ಲ ಸಚಿವ ಶ್ರಿರಾಮುಲು ಹೇಳಿದರು.

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ಅದರ ಬಗ್ಗೆ ಮಾತನಾಡಿ ಪಕ್ಷಕ್ಕೆ, ನಾಯಕರಿಗೆ ಮುಜುಗರ ತರಲು ಬಯಸುವುದಿಲ್ಲ. ನಾನು ರಾಷ್ಟ್ರೀಯ ಪಕ್ಷದಲ್ಲಿ ಇರುವವನು.  ಪಕ್ಷದ ವರಿಷ್ಠರು ತಗೆದುಕೊಳ್ಳುವ ಕ್ರಮಕ್ಕೆ ನಾನು ಬದ್ಧನಾಗಿರುತ್ತೇನೆ.ನಮ್ಮಲ್ಲಿ ಯಾವುದೆ ಭಿನ್ನಾಭಿಪ್ರಾವಿಲ್ಲ. ನಾವೆಲ್ಲರು ಒಗ್ಗಟ್ಟಿನಿಂದ‌ ಇದ್ದೇವೆ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು.