ಡೆಂಗ್ಯೂ ಮತ್ತು ಮಲೇರಿಯಾ ಸಾಂಕ್ರಾಮಿಕ ರೋಗಗಳಿಗೆ ಮುಂಜಾಗ್ರತಾ ಕ್ರಮವಹಿಸಬೇಕು: ಪಾಟೀಲ
Preventive measures should be taken against dengue and malaria epidemics: Patil
ಧಾರವಾಡ 16: ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗಿರುವ ಕಾರಣ ಗ್ರಾಮದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಸಾಂಕ್ರಾಮಿಕ ರೋಗಗಳಿಗೆ ಮುಂಜಾಗ್ರತಾ ಕ್ರಮವಹಿಸಬೇಕೆಂದು ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ವಿವಿಧ ಕಾರ್ಯಕ್ರಮಗಳ ಕುರಿತು ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಆರೋಗ್ಯದ ವಿಚಾರವಾಗಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹೆಚ್ಚಿನ ಕಾಳಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ನಡೆಸಲಾಗುವ ವಿವಿಧ ಐ ಇ ಸಿ ಜಾಗೃತಿ ಕಾರ್ಯಕ್ರಮಗಳು ಹಾಗೂ ಸರ್ಕಾರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ತಿಳಿಸಿದರು.ಗ್ರಾಮೀಣ ಮಟ್ಟದಿಂದ ಜಿಲ್ಲಾಮಟ್ಟದವರೆಗಿನ ಎಲ್ಲಾ ಆರೋಗ್ಯ ಕೇಂದ್ರಗಳು ಹಾಗೂ ಆಸ್ಪತ್ರೆಗಳಲ್ಲಿ ಸರಿಯಾದ ಸಮಯದಲ್ಲಿ ಹಾಜರಿದ್ದು, ರೋಗಿಯ ಆರೈಕೆ ಜೊತೆಗೆ ಆಡಳಿತ ವಿಚಾರದಲ್ಲಿಯೂ ಹೆಚ್ಚಿನ ಒತ್ತು ನೀಡುವಂತೆ ಸೂಚನೆ ನೀಡಿದರು.ಜಿಲ್ಲೆಯಲ್ಲಿರುವ ಎಲ್ಲಾ ಉಪ ಕೇಂದ್ರಗಳು,ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳು ಕಾಯಕಲ್ಪ ಯೋಜನೆ ಅಡಿಯಲ್ಲಿ ಸೂಚಿಸಿದಂತಹ ಮಾನದಂಡಗಳ ಪ್ರಕಾರ ಅರ್ಹತೆ ಪಡೆದುಕೊಳ್ಳಬೇಕು ಎಂದರು. ಈ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೊನಿಕೆರೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರ, ಜಿಲ್ಲಾ ಪಂಚಾಯತ್ ಸಿಬ್ಬಂದಿ ಉಪಸ್ಥಿತಿದರು.ಡಿಜರಚಿಡಿ,ಆಜಠಿಣಣಥಿ ಖಜಛಿಡಿಜಣಚಿಡಿಥಿ,ಚಟಟಚಿ ಕಚಿಟಿಛಿಚಿಥಿಚಿಣ,ಆಚಿಡಿತಿಚಿಜ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 