ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ : ಸಿಎಂ ಸಿದ್ದರಾಮಯ್ಯ
Price for land compensation to be fixed within a week: CM Siddaramaiah
ಆಲಮಟ್ಟಿಯ ಕೃಷ್ಣೆಯ ಜಲಗಿದೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರೆ್ಣ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಉಪ ಮುಖ್ಯಮಂತ್ರಿಗಳು ಸಹ ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು, ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹವಾಗಲಿದೆ. ಇದರಿಂದ 173 ಟಿಎಂಸಿ ನೀರನ್ನು 6.6 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕಾರ್ಯ ನಡೆಯಲಿದೆ. ಆಣೆಕಟ್ಟು ಎತ್ತರಿಸುವ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮಾತನಾಡಿ ಕಷ್ಣಾ ಭಾಗ್ಯ ಜಲನಿಗಮದ ಕಚೇರಿ ವಿಜಯಪುರ ಮತ್ತು ಬೆಂಗಳೂರಿನಲ್ಲಿದ್ದರೂ, ರೈತರ ಬದುಕನ್ನು ಹಸನುಗೊಳಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ರೈತರ ಬವಣೆಯನ್ನು ನಿವಾರಿಸಿ, ಸಮುದ್ರಕ್ಕೆ ವ್ಯರ್ಥವಾಗಿ ಸೇರುವ ಕೃಷ್ಣೆಯ ನೀರನ್ನು ಉಳಿಸಿ, ರೈತರ ಕೃಷಿ ಚಟುವಟಿಕೆಗೆ ಬಳಸುವಂತಾಗಬೇಕೆಂಬ ಆಶಯವನ್ನು ಮುಖ್ಯಮಂತ್ರಿಗಳು ಹಾಗೂ ನಾನು ಹೊಂದಿದ್ದು, ಈ ದಿಸೆಯಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದರು. ಬಾಗಲಕೋಟೆಯ ಮಲ್ಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿ ಪ್ರವಾಹಕ್ಕೀಡಾಗಿ ರೈತರಿಗೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಸಚಿವರಾದ ಶಿವಾನಂದ ಪಾಟೀಲ, ಮುದ್ದೇಬಿಹಾಳ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕ ಹಾಗೂ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಇತರೆ ಗಣ್ಯಮಾನ್ಯರು ಉಪಸ್ಥಿತರಿದ್ದರು.
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಹಂತಹಂತವಾಗಿ ಸ್ಥಾಪನೆ
ವಿಜಯಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತ ಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು. 2025-26ನೇ ಬಜೆಟ್‌ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆಯಂತೆ, ಕ್ರಮ ಕೈಗೊಳ್ಳಲಾಗುತ್ತಿದೆ.
- ಸಿದ್ದರಾಮಯ್ಯ, ಸಿಎಂ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 