ಶಿವರಾತ್ರಿ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್! ಗಗನಕ್ಕೇರಿದ ಹೂ-ಹಣ್ಣಿನ ಬೆಲೆ
Prices of flowers and fruits skyrocket
ದೇವರಹಿಪ್ಪರಗಿ 14: ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಡಗರ, ಸಂಭ್ರಮ ಮನೆಮಾಡಿದೆ. ಪಟ್ಟಣದಲ್ಲಿ ಶಿವನ ಪೂಜೆಗೆ ಭಕ್ತರು ಸಕಲ ತಯಾರಿ ನಡೆಸುತ್ತಿದ್ದಾರೆ. ಆದರೆ, ಮಾರುಕಟ್ಟೆಗೆ ಹೋದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಹೂವು ಮತ್ತು ಹಣ್ಣುಗಳ ದರ ಕಂಡು ದಂಗಾಗಿದ್ದಾರೆ.ಕಳೆದ ವಾರಕ್ಕೆ ಹೋಲಿಸಿದರೆ ಹಬ್ಬದ ಮುನ್ನಾದಿನವಾದ (ಶನಿವಾರ) ದೇವರಹಿಪ್ಪರಗಿ ಪಟ್ಟಣದ ಪ್ರಮುಖ ಮಾರುಕಟ್ಟೆ ಹಾಗೂ ಮೊಹರೆ ವೃತ್ತದಲ್ಲಿ ಹೂವು ಹಾಗೂ ಹಣ್ಣಿನ ದರದಲ್ಲಿ ಕೊಂಚ ಏರಿಕೆಯಾಗಿದೆ. ಸಾರ್ವಜನಿಕರು ಪಟ್ಟಣದ ಪ್ರಮುಖ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ಜೋರಾಗಿದೆ. ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ದರ ಏರಿಕೆ ಮಾಡಿದ್ದಾರೆ.ಶಿವರಾತ್ರಿ ಪೂಜೆಗೆ ಅತ್ಯಗತ್ಯವಾದ ಬಿಲ್ವಪತ್ರೆಗೆ ಭಾರೀ ಬೇಡಿಕೆ ಉಂಟಾಗಿದೆ. ಪೂಜೆಗೆ ಬೇಕಾದ ಬಾಳೆಹಣ್ಣು, ದ್ರಾಕ್ಷಿ, ಸೇಬು, ಸಪೋಟ, ಕಲ್ಲಂಗಡಿ, ಪೇರಲ, ದಾಳಿಂಬೆ ಹಾಗೂ ಕಿತ್ತಳೆ ಹಣ್ಣುಗಳ ದರವೂ ಕಳೆದ ವಾರಕ್ಕಿಂತ ಶೇ.20-30 ರಷ್ಟು ಹೆಚ್ಚಾಗಿದೆ.
*ಗ್ರಾಹಕರ ಪರದಾಟ*
ಕಳೆದ ವಾರ ಬೆಲೆಗಳು ಕಡಿಮೆಯಿದ್ದವು. ಆದರೆ ಹಬ್ಬ ಹತ್ತಿರ ಬರುತ್ತಿದ್ದಂತೆ ಹೂ, ಹಣ್ಣು ಹಂಪಲಗಳ ಬೆಲೆ ಏರಿಕೆ ಬಿಸಿ ಗ್ರಾಹಕರಿಗೆ ತಟ್ಟಿದೆ ಆದರೂ ವರ್ಷಕ್ಕೊಮ್ಮೆ ಬರುವ ಹಬ್ಬವಾದ್ದರಿಂದ ದೇವರ ಪೂಜೆಗೆ ತೆಗೆದುಕೊಳ್ಳಲೇಬೇಕಿದೆ ಎಂದು ಮಾರುಕಟ್ಟೆಗೆ ಬಂದಿದ್ದ ಗ್ರಾಹಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಒಟ್ಟಿನಲ್ಲಿ ಬೆಲೆ ಏರಿಕೆಯ ನಡುವೆಯೂ ಭಕ್ತರು ಜಾಗರಣೆ ಮತ್ತು ಶಿವಪೂಜೆಗೆ ಬೇಕಾದ ಸಿದ್ಧತೆಗಳನ್ನು ಉತ್ಸಾಹದಿಂದಲೇ ಮಾಡಿಕೊಳ್ಳುತ್ತಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 