ಗ್ರಾಮೀಣ ಆರ್ಥಿಕತೆಗೆ ಪ್ರಾಥಮಿಕ ಸಹಕಾರ ಸಂಘಗಳೇ ಬೆನ್ನೆಲುಬು: ಲಕ್ಷ್ಮೀ ಹೆಬ್ಬಾಳಕರ್
Primary cooperatives are the backbone of the rural economy: Lakshmi Hebbalkar
ಬೈಲಹೊಂಗಲ 03 : ಮುರಗೋಡಿನ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 75ನೇ ವರ್ಷದ ’ಅಮೃತ ಮಹೋತ್ಸವ’ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.ಗ್ರಾಮೀಣ ಪ್ರದೇಶಗಳ ಆರ್ಥಿಕತೆಗೆ ಪ್ರಾಥಮಿಕ ಸಹಕಾರ ಸಂಘಗಳೇ ಬೆನ್ನೆಲುಬಾಗಿದ್ದು, ಕಳೆದ 75 ವರ್ಷಗಳಿಂದ ಈ ಸಂಸ್ಥೆಯ ಸೇವೆ ಅನನ್ಯ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಳೆದ 25 ವರ್ಷಗಳಿಂದ ಸಂಘದ ಅಧ್ಯಕ್ಷರಾಗಿ ಗೀತಾ ದೇಸಾಯಿ ಅವರ ಸೇವೆಯನ್ನು ಶ್ಲಾಘಿಸಿದ ಲಕ್ಷ್ಮೀ ಹೆಬ್ಬಾಳಕರ್, ಪುರುಷ ಪ್ರಧಾನ ಸಮಾಜದಲ್ಲೂ ಮಹಿಳೆಯ ಸಾಧನೆಗೆ ಇದು ಸಾಕ್ಷಿ ಎಂದರು. ಇದೇ ಸುಸಂದರ್ಭದಲ್ಲಿ ಶ್ರೀಮಂತ ಮಲ್ಲಿಕಾರ್ಜುನ (ಅಣ್ಣಾಸಾಹೇಬ) ವೀರಭದ್ರ್ಪ ದೇಸಾಯಿ ಅವರ ಕಂಚಿನ ಪ್ರತಿಮೆಯ ಅನಾವರಣ ಹಾಗೂ ಶ್ರೀಮಂತ ಗೀತಾ ದೇಸಾಯಿ ಅವರ 25 ವರ್ಷಗಳ ಸುದೀರ್ಘ ಸೇವೆಯ ಬೆಳ್ಳಿಹಬ್ಬದ ಕಾರ್ಯಕ್ರಮ ಸಹ ನಡೆಯಿತು.
ಕಾರ್ಯಕ್ರಮದಲ್ಲಿ ಮುರಗೋಡದ ಮ.ನಿ.ಪ್ರ.ಸ್ವ ದುರದುಂಡೇಶ್ವರ ಮಠದ ನೀಲಕಂಠ ಮಹಾಸ್ವಾಮಿಗಳು, ಶಿವ ಚಿದಂಬರೇಶ್ವರ ಮಠದ ದಿವಾಕರದೀಕ್ಷಿತ್ ಮಹಾಸ್ವಾಮಿಗಳು, ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ, ಶಾಸಕ ಮಹಾಂತೇಶ ಕೌಜಲಗಿ, ಗೀತಾ ದೇಸಾಯಿ, ಕಾರ್ತಿಕ ಪಾಟೀಲ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮಹಾಂತೇಶ್ ಮತ್ತಿಕೊಪ್ಪ, ನಾಗರಾಜ ದೇಸಾಯಿ, ಅಜಿತ್ ದೇಸಾಯಿ, ವಿನಯಕುಮಾರ ದೇಸಾಯಿ, ಮಹಾಂತೇಶ್ ದೊಡ್ಡಗೌಡರ್, ಮಹಾಂತೇಶ್ ಕಳ್ಳಿಬಡ್ಡಿ, ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 