ನವದೆಹಲಿ, ನ.29-ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಪ್ರಥಮ ಬಾರಿಗೆ ಗುರುವಾರ ಭಾರತಕ್ಕೆ ಭೇಟಿ ನೀಡಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಉಭಯ ನಾಯಕರು ಎರಡೂ ದೇಶಗಳ ನಡುವಿನ ಸಹಕಾರ ಮತ್ತು ದ್ವಿಪಕ್ಷೀಯ ಸಂಬಂಧ ವೃದ್ಧಿ ಬಗ್ಗೆ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಶ್ರೀಲಂಕಾ ಅಧ್ಯಕ್ಷರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಶ್ರೀಲಂಕಾ ಅಧ್ಯಕ್ಷರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ ಸಮಾಧಿಗೆ ಗೌರವ ಸಲ್ಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನಾಗರಿಕ ಸಂಬಂಧವನ್ನು ಸಹಸ್ರಮಾನಗಳ ಮೂಲಕ ಪೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಭಾರತಕ್ಕೆ ಆಗಮಿಸಿದ ಅಧ್ಯಕ್ಷ ಗೋಟಬಯ ಅವರು ತಮ್ಮ ಮೊದಲ ವಿದೇಶ ಪ್ರವಾಸದಲ್ಲಿದ್ದು, ಇದು ಭಾರತ-ಶ್ರೀಲಂಕಾ ಸಂಬಂಧಗಳ ಶಕ್ತಿ ಮತ್ತು ಚೈತನ್ಯವನ್ನು ತೋರಿಸುತ್ತದೆ.
ರಾಜಪಕ್ಸೆ ಅವರು ಮೂರು ದಿನಗಳ ಭಾರತ ಭೇಟಿಯಲ್ಲಿದ್ದಾರೆ.
ಭೇಟಿ ನೀಡಿದ ಗಣ್ಯರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಗುತ್ತದೆ.
ಕೊಲಂಬೊದಿಂದ ನಿರ್ಗಮಿಸುವ ಮೊದಲು, ಗೋಟಬಯಾ ಅವರು, ಭೇಟಿಯ ಸಮಯದಲ್ಲಿ ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಎದುರು ನೋಡುತ್ತಿರುವುದಾಗಿ ಟ್ವೀಟ್ ಮಾಡಿದ್ದರು.
ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.ಜೈಶಂಕರ್ ಕಳೆದ ವಾರ ಶ್ರೀಲಂಕಾದ ಹೊಸ ಅಧ್ಯಕ್ಷರನ್ನು ಭೇಟಿಯಾಗಿದ್ದರು.