ಝಡ್‌-ಮೋಡ್‌ ಸುರಂಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Prime Minister Narendra Modi inaugurated the Z-mode tunnel

ಶ್ರೀನಗರ 13: ಕಾಶ್ಮೀರದ ಗಾಂದರ್‌ಬಲ್‌ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ 6.5 ಕಿ.ಮೀ ಉದ್ದದ ಝಡ್‌-ಮೋಡ್‌ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಉದ್ಘಾಟಿಸಿದರು.

ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಆಯಕಟ್ಟಿನ ಪ್ರದೇಶದಲ್ಲಿ ನಿರ್ಮಿಸಲಾಗಿರುವ Z-ಮೋರ್ಹ್ ಸುರಂಗ ಮಾರ್ಗವು ಹಿಮಕುಸಿತ, ಭೂಕುಸಿತದಂತಹ ಎಲ್ಲ ರೀತಿಯ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿಯೂ ಸಂಚಾರ ಸಾಧ್ಯವಿದ್ದು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಜಿತೇಂದ್ರ ಸಿಂಗ್, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು.

ಶ್ರೀನಗರ–ಲೇಹ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಈ ದ್ವಿಪಥ ಸುರಂಗವು ಶ್ರೀನಗರದಿಂದ ಸೋನ್‌ಮರ್ಗ್ ನಡುವಿನ ಸಂಪರ್ಕವನ್ನು ಸುಧಾರಿಸಲಿದೆ ಮತ್ತು  ಪಾಕಿಸ್ತಾನ, ಚೀನಾದೊಂದಿಗೆ ಗಡಿ ಹಂಚಿಕೊಂಡಿರುವ ಆಯಕಟ್ಟಿನ ಪ್ರದೇಶವಾಗಿರುವ ಲಡಾಖ್‌ಗೆ ಸರ್ವ ಖತುವಿನಲ್ಲೂ ಸಂಪರ್ಕ ಕಲ್ಪಿಸುತ್ತದೆ.

ಝಡ್-ಮೋರ್ಹ್ ಸುರಂಗ ಮಾರ್ಗದ ಕಾಮಗಾರಿ ಮೇ 2015 ರಲ್ಲಿ ಪ್ರಾರಂಭವಾಗಿತ್ತು. ಆದರೆ ಹಣಕಾಸಿನ ಒತ್ತಡದಿಂದಾಗಿ 2018 ರಲ್ಲಿ ಕೆಲಸವನ್ನು ನಿಲ್ಲಿಸಿದ್ದರಿಂದ ಯೋಜನೆಯನ್ನು ಪೂರ್ಣಗೊಳಿಸಲು ಸುಮಾರು ಒಂದು ದಶಕ ತೆಗೆದುಕೊಂಡಿತು. ರೂ.2,716. 90 ಕೋಟಿ ವೆಚ್ಚದ ಸುರಂಗ ಮಾರ್ಗ ನಿರ್ಮಾಣಕ್ಕೆ ಯುಪಿಎ-2 ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಸಿ. ಪಿ. ಜೋಶಿ ಅವರು ಅಂದಿನ ಸಂಪುಟ ಸಹೋದ್ಯೋಗಿಯಾಗಿದ್ದ ಫಾರೂಖ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಸಂಸದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು.