ಪ್ರಯಾಗ್‌ರಾಜ್‌ನಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ

Prime Minister Narendra Modi took holy bath in Prayagraj

ಪ್ರಯಾಗ್ ರಾಜ್ 05: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.ಸಂಗಮದಲ್ಲಿ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಪವಿತ್ರ ಸ್ನಾನ ಮಾಡಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.

ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿದ್ದು ಸಂತೋಷವಾಯಿತು. ಸಂಗಮದಲ್ಲಿನ ಸ್ನಾನವು ದೈವಿಕ ಸಂಪರ್ಕದ ಕ್ಷಣವಾಗಿದೆ, ಅದರಲ್ಲಿ ಭಾಗವಹಿಸಿದ ಕೋಟ್ಯಂತರ ಇತರರಂತೆ, ನಾನು ಕೂಡ ಭಕ್ತಿಯ ಮನೋಭಾವದಿಂದ ತುಂಬಿದ್ದೆ. ಗಂಗಾ ಮಾತೆ ಎಲ್ಲರಿಗೂ ಶಾಂತಿ, ಬುದ್ಧಿವಂತಿಕೆ, ಉತ್ತಮ ಆರೋಗ್ಯ ಮತ್ತು ಸಾಮರಸ್ಯವನ್ನು ದಯಪಾಲಿಸಲಿ' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಯಾಗ್ ರಾಜ್ ಮಹಾಕುಂಭ ಮೇಳದ ನಂತರ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಮೋದಿ ಅವರ ಪುಣ್ಯ ಸ್ನಾನದ ಹಿನ್ನೆಲೆಯಲ್ಲಿ ಪ್ರಯಾಗ್‌ರಾಜ್ ಹಾಗೂ ಕುಂಭನಗರಿಯಲ್ಲಿ ಭಾರಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು.