ನವದೆಹಲಿ, ಅಕ್ಟೋಬರ್ 11: ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ಶುಕ್ರವಾರ ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಭಾರತದ ನಿಜವಾದ ಪುತ್ರ ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ನನ್ನ ವಿನಮ್ರ ಗೌರವವನ್ನು ಅರ್ಪಿಸುತ್ತೇನೆ. ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅವರು ಮಹತ್ವದ ಕೊಡುಗೆ ನೀಡಿದರು ಮತ್ತು ಸ್ವತಂತ್ರ ನಂತರದ ಯುಗದಲ್ಲಿ ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸುವಲ್ಲಿ ಬಣ್ಣಿಸಲಾಗದ ಕೊಡುಗೆ ನೀಡಿದರು. ಅವರ ತ್ಯಾಗ ಮತ್ತು ಸಮರ್ಪಣೆ ಯಾವಾಗಲೂ ಸ್ಮರಣೀಯ ಎಂದಿದ್ದಾರೆ.