ಸಂಪನ್ಮೂಲ ಸಂಗ್ರಹಕ್ಕೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಯಡಿಯೂರಪ್ಪ ಕಟ್ಟಾಜ್ಞೆ
ಬೆಂಗಳೂರು, ಫೆ 10 : ಬೆಟ್ಟದಷ್ಟು ಆರ್ಥಿಕ ಸವಾಲುಗಳ ನಡುವೆ ಬಜೆಟ್ ಸಿದ್ಧತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರತರಾಗಿದ್ದು, ಅಬಕಾರಿ, ವಾಣಿಜ್ಯ ಸಂಘ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ವಲಯಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು.
ಮಾರ್ಚ್ 5ರಂದು 2020 ಅವಧಿಯ ಈ ದಶಕದ ಮೊದಲ ಬಜೆಟ್ ಮಂಡಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ಬಜೆಟ್ ಪೂರ್ವ ಸಭೆ ನಡೆಸಿ ಆಯಾ ವಲಯಗಳಿಗೆ ನೀಡಬೇಕಾಗಿರುವ ಆದ್ಯತೆ ಬಗ್ಗೆ ಪರಿಶೀಲನೆ ನಡೆಸಿದರು.
ವಿವಿಧ ಸಂಘ ಸಂಸ್ಥೆಗಳು ಬಜೆಟ್ ಮೇಲೆ ವ್ಯಾಪಕ ನಿರೀಕ್ಷೆ ಇಟ್ಟುಕೊಂಡಿದ್ದು, ಅವುಗಳನ್ನು ಈಡೇರಿಸುವ ಜವಾಬ್ದಾರಿ ಯಡಿಯೂರಪ್ಪ ಅವರ ಮೇಲಿದೆ. ಆದಾಯ ಬರುವ ಇಲಾಖೆಗಳನ್ನು ಪ್ರಮುಖವಾಗಿ ಕೇಂದ್ರೀಕರಿಸಿದ್ದು, ಸಂಪನ್ಮೂಲ ಹೆಚ್ಚಳಕ್ಕೆ ಒತ್ತು ನೀಡಿದ್ದಾರೆ. ಈ ಸಂಬಂಧ ಅಧಿಕಾರಿಗಳು ಸಹ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಳೆದ ಜೂನ್ 26 ರಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಹೊಸದಾಗಿ ಬಜೆಟ್ ಮಂಡಿಸಿರಲ್ಲ. ಈ ವರ್ಷ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಅನಿವಾರ್ಯತೆ ಇರುವುದರಿಂದ ಬಜೆಟ್ ಮಂಡನೆಗೆ ಅವಶ್ಯವಿರುವ ಎಲ್ಲಾ ಸಿದ್ಧತೆಗಳಲ್ಲಿ ತೊಡಗಿದ್ದಾರೆ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಟೀಕಿಸುತ್ತಿದ್ದು, ಈ ಟೀಕೆಗಳನ್ನು ಸುಳ್ಳು ಮಾಡುವುದು ಯಡಿಯೂರಪ್ಪ ಅವರಿಗೆ ಸವಾಲಾಗಿದೆ.
ಈ ಬಾರಿ ರಾಜ್ಯದಲ್ಲಿ 76,660 ಕೋಟಿ ವಾಣಿಜ್ಯ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು ಈ ಪೈಕಿ 55,984 ಕೋಟಿ ಸಾಧನೆ ಮಾಡಲಾಗಿದೆ. ಸರಕು ಮತ್ತು ಸೇವಾ ತೆರಿಗೆ - ಜಿ.ಎಸ್.ಟಿಯಲ್ಲಿ 61,245 ಕೋಟಿ ಹಣ ಸಂಗ್ರಹಿಸಲಾಗಿದೆ. 22,950 ಕೋಟಿ ಅಬಕಾರಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿತ್ತು. ಈ ಪೈಕಿ 16,187 ಕೋಟಿ ಹಣ ಸಂಗ್ರಹಿಸಲಾಗಿದೆ. ಅಬಕಾರಿ ಇಲಾಖೆಯಲ್ಲಿನ ತೆರಿಗೆ ಸಂಗ್ರಹದಲ್ಲಿ ಶೇ. 77.23 ರಷ್ಟು ಅಭಿವೃದ್ಧಿ ಸಾಧಿಸಲಾಗಿದೆ.
ಇನ್ನು ಸಾರಿಗೆ ಇಲಾಖೆಯಿಂದ ಒಟ್ಟು 7100 ಕೋಟಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಲಾಗಿದ್ದು, ವಾಹನ ಮಾರಾಟ ಕುಸಿತದಿಂದ 460.20 ಕೋಟಿ ಕೊರತೆಯಾಗಿದೆ ಎನ್ನಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ 11,828 ಕೋಟಿ ರೂ. ರಾಜಸ್ವ ಸಂಗ್ರಹದ ವಾರ್ಷಿಕ ಗುರಿ ಹೊಂದಲಾಗಿದೆ.
ಜಿಎಸ್ಟಿ ತೆರಿಗೆ ವಂಚನೆ ನಿವಾರಿಸಿ, ತೆರಿಗೆ ಸಂಗ್ರಹ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚಿಲ್ಲರೆ ಮದ್ಯ ಮಾರಾಟ ಹಾಗೂ ಮದ್ಯ ಉತ್ಪಾದನಾ ಘಟಕಗಳ ಪರವಾನಿಯನ್ನು ಆನ್‍ಲೈನ್ ಮೂಲಕ ನವೀಕರಣ ಮಾಡಲು ಒತ್ತು ನೀಡುವ ಬಗ್ಗೆಯೂ ಯಡಿಯೂರಪ್ಪ ಸಭೆಯಲ್ಲಿ ಚರ್ಚಿಸಿದ್ದು, ಖಜಾನೆಗೆ ಹೆಚ್ಚು ಆದಾಯನೀಡಬಲ್ಲ ಇಲಾಖೆಗಳಿಗೆ ಹೆಚ್ಚು ನೀಡಲು ಸೂಚಿಸಲಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 