ಮಕ್ಕಳ ರಕ್ಷಣೆ, ಶಿಕ್ಷಣಕ್ಕೆ ಒತ್ತು ನೀಡಿ: ‘ಬೇಟಿ ಬಚಾವೋ-ಬೇಟಿ ಪಡಾವೋ’
Prioritize child protection and education: ‘Beti Bachao, Beti Padhao’
ಲೋಕದರ್ಶನ ವರದಿ
ಗದಗ, ಸೆ.10 (ಕರ್ನಾಟಕ ವಾರ್ತೆ): ಗದಗ ತಾಲೂಕು ಲಕ್ಕುಂಡಿ ಗ್ರಾಮದಲ್ಲಿ ಸೆ.9ರಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ‘ಬೇಟಿ ಬಚಾವೋ-ಬೇಟಿ ಪಡಾವೋ ಕಾರ್ಯಕ್ರಮ ನಡೆಯಿತು.
ಜಿಲ್ಲಾ ನಿರೂಪಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳ ರಕ್ಷಣೆ, ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ಸಮಾಜದ ಎಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ‘ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆಯ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಜಿ. ಮಣ್ಣೂರ, ಜಿಲ್ಲಾ ನಿರೂಪಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಯಶ್ರೀ ಆರ್., ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಲಕ್ಕುಂಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗಣ್ಯರು ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಅಂಗನವಾಡಿ ಕೇಂದ್ರದಲ್ಲಿಯೂ ಸಸಿ ನೆಡಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮೇಲ್ವಿಚಾರಕರು, ಪೋಷಣ್ ಅಭಿಯಾನ ಹಾಗೂ ಮಾತೃವಂದನಾ ಯೋಜನೆಯ ಸಿಬ್ಬಂದಿ, ಸಾರ್ವಜನಿಕರು ಮತ್ತು ಮಕ್ಕಳು ಭಾಗವಹಿಸಿದ್ದರು. ಭಾಗವಹಿಸಿದವರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಮಂಜುಳಾ ಬುದ್ಧಪ್ಪ ಕಾರ್ಯಕ್ರಮ ನಿರೂಪಿಸಿದರು. ವಿನೋದಾ ಹೊಂಬಳ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 