ರುದ್ರಭೂಮಿಗಳ ಸ್ವಚ್ಛತೆಗೆ ಆದ್ಯತೆ ನೀಡಿ: ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸೂಚನೆ
Prioritize cleanliness of cremation grounds: MLA Yasir Ahmed Khan Pathan directs
ಶಿಗ್ಗಾಂವಿ 25: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿರುವ ರುದ್ರಭೂಮಿಗಳನ್ನು ಸ್ವಚ್ಛವಾಗಿಡಬೇಕು. ಯಾವುದೇ ರುದ್ರಭೂಮಿಗಳ ಕುರಿತು ದೂರುಗಳು ಬಂದಲ್ಲಿ ಸಂಬಂಧಿಸಿದ ಪಿಡಿಒಗಳ ವಿರುದ್ಧ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಅಡುಗೆ ಕೋಣೆಗಳ ಕೊರತೆ, ಕಟ್ಟಡಗಳ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಸುಮಾರು 6 ಸಾವಿರ ಮನೆಗಳು ಮಂಜೂರಾಗುವ ನೀರೀಕ್ಷೆಯಿದ್ದು, ಪ್ರತಿ ಗ್ರಾಮ ಪಂಚಾಯಿತಿಗೆ ಸುಮಾರು 100 ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿರಂತರವಾಗಿ ನೀರಾವರಿ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು, ಕ್ಷೇತ್ರದ ಕೆರೆಗಳನ್ನು ವರದಾ ನದಿ ನೀರಿನಿಂದ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಿಡಿಒಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಕವಾಗಿ ನಿರ್ವಹಿಸಿ, ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು. ಕ್ಷೇತ್ರದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ. 14 ಮತ್ತು 15ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರೀಶೀಲನೆ ನಡೆಸಿದರು.
ತಾಲ್ಲೂಕಿನ ಗೌಳೇರದಡ್ಡಿ ಗ್ರಾಮದಲ್ಲಿ ಮತದಾರರ ಸಂಖ್ಯೆ ಕಡಿಮೆ ಇರುವ ಕಾರಣ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಅಲ್ಲಿನ ಜನರಿಗೂ ಸಮಾನ ಹಕ್ಕುಗಳಿವೆ. ಆದ್ದರಿಂದ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಮೊದಲ ಆದ್ಯತೆಯಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹೆಸ್ಕಾಂ ಇಲಾಖೆ ಸಹಕರಿಸುತ್ತಿಲ್ಲ ಎಂಬ ಪಿಡಿಒಗಳ ದೂರಿನ ಹಿನ್ನೆಲೆಯಲ್ಲಿ ಹೆಸ್ಕಾಂ ಅಧಿಕಾರಿಗಳನ್ನು ಸಭೆಗೆ ಕರೆಸಿ, ಆದ್ಯತೆಯ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು.
ಅತ್ತಿಗೇರಿ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಸುಮಾರು 20 ಲಕ್ಷ ರೂ. ಅನುದಾನ ಲಭ್ಯವಿದ್ದು, ಅದನ್ನು ಸಮರ್ಕವಾಗಿ ಬಳಸಿಕೊಂಡು ಐತಿಹಾಸಿಕ ಗ್ರಾಮವನ್ನು ಸುಂದರಗೊಳಿಸುವಂತೆ ತಿಳಿಸಿದರು. ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ತಮ್ಮ ಅನುದಾನದ ಮೂಲಕ ಕೈಗೊಳ್ಳಲಾಗುತ್ತಿದೆ ಎಂದರು. ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲದಿ, ಜಿಪಂ ಕೆಡಿಪಿ ಸದಸ್ಯ ಶಂಭುಲಿಂಗಪ್ಪ ಆಜೂರು, ಶಿಗ್ಗಾಂವಿ ತಾಪಂ ಇಒ ಮಂಜುನಾಥ ಸಾಲೊಂಕೆ, ಸವಣೂರು ತಾಪಂ ಇಒ ಬಸವರಾಜ ಶಿಡೇನೂರ ಸೇರಿದಂತೆ ಶಿಗ್ಗಾಂವಿ-ಸವಣೂರು ತಾಲ್ಲೂಕಿನ ಪಿಡಿಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ 