ಕೊಪ್ಪಳ 25: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾರಂಭಗೊಳಿಸಿ, ಜಲಮೂಲಗಳಿಲ್ಲದ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಬಹಳಷ್ಟಿದೆ. ಮಾನವೀಯತೆ ದೃಷ್ಟಿಯಿಂದ ಶೀಘ್ರ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್. ವಿಶ್ವನಾಥ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತನ ಜೆ. ಎಚ್. ಪಟೇಲ್ ಸಭಾಂಗಣದಲ್ಲಿ ಇಂದು(ಸೆ. 25) ನಡೆದ ಕನರ್ಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಲವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅವುಗಳನ್ನು ದುರಸ್ತಿಗೊಳಿಸಿ, ಅಗತ್ಯ ವಿದ್ಯುತ್ ಸಂಪರ್ಕವನ್ನು ಒದಗಿಸಿ ಜನರಿಗೆ ಅನುಕೂಲ ಮಾಡಿ ಕೊಡಿ. ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಿದ್ದಾಪುರ ಹಾಗೂ ನಂದಿಹಳ್ಳಿ ಗ್ರಾಮಗಳನ್ನು ಸಂಪಕರ್ಿಸುವ ರಸ್ತೆಯ ಬದಿ ಲೋಕೋಪಯೋಗಿ ಇಲಾಖೆಯಿಂದ ನಿಗದಿತ ಗಡಿ ನಿಮರ್ಿಸಿ. ಇದರಿಂದ ಅರಣ್ಯ ಇಲಾಖೆಯವರು ರಸ್ತೆ ಬದಿ ಗಿಡ ನೆಡಲು ಅನುಕೂಲವಾಗುತ್ತದೆ. ಅಲ್ಲದೇ ಈ ರಸ್ತೆಯ ಬದಿ ಚರಂಡಿ ನಿಮರ್ಾಣ ಕಾಮಗಾರಿಗೆ ಕ್ರಮ ಕೈಗೊಳ್ಳಿ. ಇದರಿಂದ ಹೆಚ್ಚಿನ ಪ್ರಮಾಣದ ಮಳೆ ಬಂದಾಗ ರಸ್ತೆಗುಂಟ ನೀರು ಹರಿದು ಹೋಗಿ ರಸ್ತೆ ಬೇಗ ಹಾಳಾಗುವುದನ್ನು ತಪ್ಪಿಸಬಹುದು. ಹಾಗೂ ಜಿಲ್ಲೆಯ ವಿವಿಧೆಡೆ ಬಾಕಿ ಇರುವ ರಸ್ತೆ ನಿಮರ್ಾಣ, ರಸ್ತೆ ಅಗಲೀಕರಣ, ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಕಾಯರ್ಾರಂಭ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಏತನೀರಾವರಿ ಯೋಜನೆ ಆರಂಭಗೊಂಡಿದ್ದು, ಈ ಕುರಿತು ಪ್ರತಿಯೊಂದು ವಿವರಗಳನ್ನು ಒಳಗೊಂಡ ವರದಿಯನ್ನು 15 ದಿನಗಳೊಳಗೆ ಸಲ್ಲಿಸಬೇಕು. ಏತ ನೀರಾವರಿ ಯೋಜನೆಯಡಿ ಕಾಮಗಾರಿಗೆ ಕ್ರಿಯಾಯೋಜನೆ ರೂಪಿಸುವಾಗ ಸಾಧಕ ಬಾಧಕಗಳನ್ನು ಪರಿಶೀಲಿಸಿ ಆ ಕುರಿತು ಸಂಬಂಧಿಸಿದ ಶಾಸಕರಿಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ತಪ್ಪು ಮಾಹಿತಿ ನೀಡಕೂಡದು ಎಂದು ಸಣ್ಣ ನೀರವಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲೆಯ ಕೆಲವೆಡೆ ಅಕ್ರಮ ಮರಳು ಸಾಕಾಣಿಕೆ ಕುರಿತು ದೂರುಗಳು ಬಂದಿವೆ. ಅವುಗಳನ್ನು ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳಿ. ರೈತ ತನ್ನ ಗೃಹ ಬಳಕೆ ಅಥವಾ ಕೃಷಿ ಭೂಮಿ ಅಭಿವೃದ್ಧಿಗೆ ಮರಳು ಬಳಸಿಕೊಂಡರೆ ಅವರ ವಿರುದ್ಧ ಪ್ರಕರಣ ದಾಖಲಿಸುತ್ತಿರುವ ಕುರಿತು ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚೆಂಡೂರು ಹನುಮಂತಗೌಡ ಪಾಟೀಲ ರವರ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು ಈಗಾಗಲೇ ದಾಖಲಾಗಿರುವ ಪ್ರಕರಣಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚಚರ್ಿಸಿ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಸಂಬಂಧಿಸಿದಂತೆ, ನಿದರ್ಿಷ್ಟ ಗ್ರಾಮದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಇರುವ ಸಕರ್ಾರದ ಮಾನದಂಡಗಳ ಕುರಿತು ಮಾಹಿತಿ ಪಡೆದ ಅವರು, ಸಕರ್ಾರದ ಮಾರ್ಗಸೂಚಿಯನ್ವಯ ಅಗತ್ಯವಿರುವ ಗ್ರಾಮಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ಕೈಗೊಳ್ಳಿ ಎಂದು ಅವರು ಹೇಳಿದರು. ಶಾಲಾ-ಕಾಲೇಜು ಮಕ್ಕಳು ವಾಸಿಸುವ ಯಾವುದೇ ವಸತಿ ಶಾಲೆಗಳ ಕಟ್ಟಡದಲ್ಲಿ ಕಡ್ಡಾಯವಾಗಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಶಾಲಾ ಕಟ್ಟಡಗಳೂ ಒಳಗೊಂಡಂತೆ ವಿದ್ಯುತ್ ಸಂಪರ್ಕಗಳು, ವಿದ್ಯುತ್ ಪರಿವರ್ತಕಗಳನ್ನು ಅಳವಡಿಸುವದು, ಸ್ಥಳಾಂತರಿಸುವುದು ಸೇರಿದಂತೆ ಜೆಸ್ಕಾಂಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಈಗಾಗಲೇ ಆರಂಭಗೊಂಡಿರುವ ಕಟ್ಟಡ ಕಾಮಗಾರಿಗಳ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿ ಹಾಗೂ ಏಜೆನ್ಸಿ ಅವರು ಜಂಟಿ ಸಮೀಕ್ಷೆ ನಡೆಸಿ, ಕಾಮಗಾರಿಯ ವಿವರ, ಪೂರ್ಣಗೊಳಿಸಲು ನಿಗದಿ ಪಡಿಸಿದ ಅವಧಿ, ವಿಳಂಬಕ್ಕೆ ಕಾರಣಗಳು ಸೇರಿದಂತೆ ಕಾಮಗಾರಿ ಕುರಿತು ವಿವರವಾದ ಮಾಹಿತಿಯನ್ನು ವಾರದೊಳಗೆ ಸಲ್ಲಿಸಬೇಕು. ಕಾಮಗಾರಿಗೆ ಸಂಬಂಧಿಸಿದಂತೆ ಏನಾದರು ತೊಂದರೆ, ಗೊಂದಲಗಳು ಇದ್ದಲ್ಲಿ, ಅನುಮೋದನೆಗೊಂಡ ಕಾಮಗಾರಿಗೆ ನಿವೇಶನದ ಅಗತ್ಯವಿದ್ದಲ್ಲಿ, ಗೊಂದಲಗಳಿದ್ದಲ್ಲಿ ಜಿಲ್ಲಾಧಿಕಾರಿಗಳು ಅಥವಾ ಸಿ.ಇ.ಒ ಅವರನ್ನು ಸಂಪಕರ್ಿಸಿ. ಈ ಕುರಿತು ಜಿ.ಪಂ. ಅಧ್ಯಕ್ಷರಿಗೆ ಮಾಹಿತಿ ನೀಡಿ ಎಂದು ಹೇಳಿದರು. ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚಚರ್ಿಸಲಾಯಿತು. ಜಿ.ಪಂ. ಉಪಕಾರ್ಯದಶರ್ಿ ಎನ್.ಕೆ ತೊರವಿ, ಯೋಜನಾ ನಿದರ್ೇಶಕರಾದ ರವಿ ಬಿಸರಳ್ಳಿ, ಜಿಲ್ಲಾ ಪಂಚಾಯತ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.