ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಆದ್ಯತೆ ನೀಡಿ: ಸಂಗಮೇಶ್ವರ ಮಹಾಸ್ವಾಮಿ
Prioritize eco-friendly Ganesha idols: Sangameshwara Mahaswami
ದೇವರಹಿಪ್ಪರಗಿ 25 : ಗಣೇಶೋತ್ಸವದಲ್ಲಿ ಪಿಒಪಿ ಮೂರ್ತಿಗಳ ಬಳಕೆಯನ್ನು ನಿರ್ಬಂಧಿಸಿ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಉತ್ನಾಳ ಹಿರೇಮಠದ ಪ.ಪೂ. ಸಂಗಮೇಶ್ವರ ಮಹಾಸ್ವಾಮಿಗಳು ಹೇಳಿದರು. ಯಾಳವಾರ ಗ್ರಾಮದ ಗ್ರಾಪಂ ಆವರಣದಲ್ಲಿ ದೃಶ್ಯಬಿಂಬ ಕಲಾ ಪ್ರತಿಷ್ಠಾನ, ವಿಜಯಪುರ ಹಾಗೂ ಬಸವ ಹಸಿರು ಬಳಗ ದೇವರಹಿಪ್ಪರಗಿ ಸಹಯೋಗದಲ್ಲಿ ಆಯೋಜಿಸಿದ್ದ ‘ಅಮೃತ ಹಸ್ತದ ಮಣ್ಣಿನ ಗಣೇಶ’ ಪರಿಸರ ಸ್ನೇಹಿ ಗಣಪತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸುಮಾರು 125 ಗ್ರಾಮಗಳಿಗೆ ಮಣ್ಣಿನ ಗಣೇಶ ಮೂರ್ತಿಗಳನ್ನು ತಲುಪಿಸುವ ಉದ್ದೇಶದ ಈ ಕಾರ್ಯ ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಬಸಯ್ಯ ಶಾಸ್ತ್ರಿಗಳು, ಎಸ್.ಎಸ್. ಗಡೇದ, ರಮೇಶ ಸಾಸನೂರ, ಕಲಾವಿದ ಕೆಂಚಪ್ಪ ಬಡಿಗೇರ ಸೇರಿದಂತೆ ಗಣ್ಯರು, ಕಲಾವಿದರು ಹಾಗೂ ಮುಖಂಡರು ಉಪಸ್ಥಿತರಿದ್ದರು. ಕೆಂಚಪ್ಪ ಬಡಿಗೇರ ಮಣ್ಣಿನಿಂದ ಗಣೇಶ ಮೂರ್ತಿ ತಯಾರಿಸುವ ಪ್ರಾತ್ಯಕ್ಷಿಕೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 