ಜನಸೇವೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Prioritize public service in your work: Chief Minister D.K. Shivakumar
ಲೋಕದರ್ಶನ ವರದಿ
ಬಳ್ಳಾರಿ, ಆ.11: ರಾಜ್ಯದ ಯಶಸ್ಸು ಹಾಗೂ ಸಾರ್ವಜನಿಕ ಸೇವೆಯಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಎಲ್ಲರೂ ಜನಸಾಮಾನ್ಯರ ಸೇವಕರಾಗಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರ್ಕಾರದ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಂಬ ಭೇದವಿಲ್ಲದೆ ಜನರ ಏಳಿಗೆಗಾಗಿ ಶ್ರಮಿಸಬೇಕು.
ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದಾಗಿರಬೇಕು ಎಂದು ಹೇಳಿದರು. ವಿಧಾನಸೌಧವು ರಾಜ್ಯದ ಪ್ರಜಾಪ್ರಭುತ್ವದ ಮೌಲ್ಯಗಳ ಸಂಕೇತವಾಗಿದ್ದು, ಕೆಂಗಲ್ ಹನುಮಂತಯ್ಯ, ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ ಸೇರಿದಂತೆ ಹಲವು ಮಾಜಿ ಮುಖ್ಯಮಂತ್ರಿಗಳ ಕೊಡುಗೆಯನ್ನು ಸ್ಮರಿಸಿದ ಮುಖ್ಯಮಂತ್ರಿ, ತಮ್ಮ ಕಾರ್ಯಗಳು ಮುಂದಿನ ಪೀಳಿಗೆಗೂ ನೆನಪಿನಲ್ಲಿ ಉಳಿಯುವಂತೆ ಆಡಳಿತ ನಡೆಸಬೇಕು ಎಂದರು.
ಜನಸೇವೆಗೆ ಆದ್ಯತೆ
ರಾಜ್ಯದ ಸುಮಾರು 7 ಕೋಟಿ ಜನಸಂಖ್ಯೆಗೆ ಹೋಲಿಸಿದರೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಸಂಖ್ಯೆ ಕಡಿಮೆಯಿದೆ. ಹೀಗಾಗಿ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು. ಜನರ ಅರ್ಜಿಗಳು ಮತ್ತು ಕುಂದುಕೊರತೆಗಳು ಅನಗತ್ಯವಾಗಿ ಜಿಲ್ಲಾ ಅಥವಾ ರಾಜ್ಯ ಮಟ್ಟಕ್ಕೆ ತಲುಪದಂತೆ ತಾಲೂಕು ಹಾಗೂ ಸ್ಥಳೀಯ ಮಟ್ಟದಲ್ಲೇ ಪರಿಹರಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ನೀರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ತಮ್ಮ ನಿಯೋಜಿತ ಕೇಂದ್ರಗಳಲ್ಲಿ ವಾಸವಿದ್ದು, ಕಚೇರಿಯಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಿರಬೇಕು ಎಂದು ಸೂಚಿಸಿದರು.
ಮನೆ ಬಾಗಿಲಿಗೆ ಖಾತಾ
ಗ್ರಾಮೀಣ ಪ್ರದೇಶದ ಸುಮಾರು 1.11 ಕೋಟಿ ಕುಟುಂಬಗಳು ಹಾಗೂ ನಗರ ಪ್ರದೇಶದ 25 ಲಕ್ಷ ಮನೆಗಳಿಗೆ ಯಾವುದೇ ಲಂಚದ ಹಂಗಿಲ್ಲದೆ, ಗೌರವಯುತವಾಗಿ ಫೋಟೋ ಮತ್ತು ಸಹಿ ಸಹಿತ ಖಾತಾ ಹಾಗೂ ಪ್ರಮಾಣಪತ್ರಗಳನ್ನು ವಿತರಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 5ರಿಂದ 6 ತಿಂಗಳೊಳಗೆ ರಾಜ್ಯದ ಎಲ್ಲ ಪಂಚಾಯಿತಿ ಹಾಗೂ ಹೋಬಳಿಗಳಲ್ಲಿ ಈ ಕಾರ್ಯ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 