ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಘೋಷ್
Prioritize quality education: take action to improve outcomes: Ghosh
ವಿಜಯಪುರ 01: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸುವ ಮೂಲಕ ಅಗತ್ಯ ಕ್ರಮ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ ಕುಮಾರ ಘೋಷ್ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ, ಉತ್ತಮ ಫಲಿತಾಂಶಕ್ಕಾಗಿ ಸೂಕ್ಷ್ಮ ಯೋಜನೆಗಳನ್ನು ರೂಪಿಸಿ, ಆ ಯೋಜನೆಯ ಅನುಗುಣವಾಗಿ ಸಮರ್ಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸೂಚಿಸಿದರು.ಅನುದಾನಿತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಸಾರವಾಗಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳವಂತೆ ಸಂಸ್ಥೆಗಳಿಗೆ ಸೂಚಿಸಬೇಕು ಹಾಗೂ ಫಲಿತಾಂಶ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಥಮಿಕ ಶಾಲಾ ಹಂತದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಪ್ರೋತ್ಸಾಹಿಸಿ, ಪ್ರಾಥಮಿಕ ಹಂತದಲ್ಲೇ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಿದಲ್ಲಿ ಪ್ರೌಢಶಾಲೆ ಹಾಗೂ ಪದವಿ ಪೂರ್ವಗಳ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶಗಳನ್ನು ಉತ್ತಮಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ಕೆಸ್ವಾನ್ ಸಂಪರ್ಕ ಹೊಂದಿದ್ದಲ್ಲಿ ಇ-ಆಫೀಸ್ ಅನುಷ್ಟಾನಗೊಳಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಉತ್ತಮ ಫಲಿತಾಂಶಕ್ಕಾಗಿ ರೂಪಿಸಿರುವ ಯೋಜನೆಗಳ ಕುರಿತು ಹಾಗೂ ಪ್ರತಿ ವಾರ ಶಿಕ್ಷಣದ ಅಭಿವೃದ್ದಿ ಬಗ್ಗೆ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಕುಮಾರ್ ಆಜೂರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ್ ಗುಣಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಕೋಲಾರ, ಎಲ್ಲ ತಾಲೂಕಿನ ಬಿ.ಇ.ಒ, ಸಿ.ಆರ್.ಪಿ, ಡಿ.ಆರ್.ಪಿ, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಅವರು ಮಂಗಳವಾರ ಜಿಲ್ಲಾ ಪಂಚಾಯತಿಯ ಮಿನಿ ಸಭಾ ಭವನದಲ್ಲಿ ವಿವಿಧ ಇಲಾಖೆಯ ಯೋಜನಾ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲ ಇಲಾಖೆಗಳು ತಮ್ಮ ಇಲಾಖಾ ಕಾರ್ಯಕ್ರಮಗಳನ್ನು ಸಮರ್ಕವಾಗಿ ಅನುಷ್ಟಾಗೊಳಿಸಿ, ನಿಗದಿ ಪಡಿಸಿದ ಗುರಿ ಸಾಧನೆ ಹಾಗೂ ಜಿಲ್ಲೆಯ ಆಸ್ಪತ್ರೆ ಹಾಗೂ ಶಾಲೆಗಳ ದುರಸ್ತಿಗಳ ಪಟ್ಟಿ ಸಿದ್ಧಪಡಿಸಿ ಪತ್ರ ಬರೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ವಸತಿ ನಿಲಯಗಳಲ್ಲಿ ಹೆಚ್ಚುವರಿಯಾದ ವಿದ್ಯಾರ್ಥಿಗಳಿಗೆ ಬಾಡಗಿ ಕಟ್ಟಡ ಪಡೆದು, ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮವಹಿಸಬೇಕು. ವಿವಿಧ ಯೋಜನೆಯಡಿ ಕಂದಾಯ ಇಲಾಖೆಗೆ ಬಂದಂತಹ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಅರ್ಜಿಗಳ ಇತ್ಯರ್ಥಕ್ಕೆ ಕ್ರಮವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ವಿಜಯ ಕುಮಾರ್ ಆಜೂರ್, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಸಂಪತ್ ಗುಣಾರಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಕೋಲಾರ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಕುಮಾರ್ ಬಾವಿದೊಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಜಿಲ್ಲಾ ಪಂಚಾಯತಿಯ ಯೋಜನಾ ಮತ್ತು ಅಂದಾಜು ಮೌಲ್ಯಮಾಪನ ಅಧಿಕಾರಿಗಳಾದ ಎ.ಬಿ.ಅಲ್ಲಾಪೂರ, ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 