ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಆನಂದ ನ್ಯಾಮಗೌಡ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಆನಂದ ನ್ಯಾಮಗೌಡ  Prioritize quality education for children: Anand Nyamagouda

ಲೋಕದರ್ಶನ ವರದಿ

ಜಮಖಂಡಿ, 18: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಸಮಾಜ ಹಾಗೂ ಕುಟುಂಬಗಳು ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಶಿಕ್ಷಣವೇ ಸಮಾಜದ ಪ್ರಗತಿಗೆ ಪ್ರಮುಖ ಆಧಾರವಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.  

ನಗರದ ಬಸವ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ನಡೆದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

“ಬ್ರಹ್ಮ ಸೃಷ್ಟಿ ಮಾಡಿದರೆ, ವಿಶ್ವಕರ್ಮರು ಧರ್ಮ ಹಾಗೂ ಸೃಜನಶೀಲತೆಯ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ವಿಶ್ವಕರ್ಮ ಸಮಾಜ ಹಾಗೂ ಗಣಿಗ ಸಮಾಜದ ನಡುವೆ ಅವಿನಾಭಾವ ಸಂಬಂಧವಿದೆ” ಎಂದು ಅವರು ಹೇಳಿದರು.  

ರಾಜ್ಯದಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಕರ್ಮ ಜಯಂತ್ಯೋತ್ಸವವನ್ನು ಆಚರಿಸುವ ಮೂಲಕ ಸಮಾಜದ ಗೌರವ ಹೆಚ್ಚಿಸುವ ಕಾರ್ಯ ಮಾಡಿದ್ದಾರೆ ಎಂದರು.  

ಸಂಖ್ಯೆಯಲ್ಲಿ ಕಡಿಮೆ ಇದ್ದರೂ ವಿಶ್ವಕರ್ಮ ಸಮಾಜದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜಮಖಂಡಿ ತಾಲೂಕಿನಲ್ಲಿ ತಹಶೀಲ್ದಾರ್ ಅನೀಲ ಬಡಿಗೇರ, ತಾಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಬಡಿಗೇರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಸುರೇಶ ಪಂಚಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕರೆತರುವ ನಿಟ್ಟಿನಲ್ಲಿ ನ್ಯಾಮಗೌಡ ಕುಟುಂಬದಿಂದ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.  

ಪಂಚಾಳ ಸಮುದಾಯದವರಿಗೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಕೇವಲ ಭಾಷಣಗಳಿಗೆ ಸೀಮಿತವಾಗದೆ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕಾಳಿಕಾ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ ?50 ಲಕ್ಷ ಅನುದಾನ ನೀಡುವ ಕಾರ್ಯವನ್ನು ಕೈಗೊಳ್ಳುವುದಾಗಿ ಆನಂದ ನ್ಯಾಮಗೌಡ ಭರವಸೆ ನೀಡಿದರು.  

ಕಾರ್ಯಕ್ರಮದಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್ಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಬಾಬು ಜತ್ತಕರ್ ಮತ್ತು ಕು. ಪ್ರೀತಿ ಲೋಹಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  

ಶಹಾಪುರ ವಿಶ್ವಕರ್ಮ ಸಮಾಜದ ಕಾಳಹಸ್ತೇಂದ್ರ ಶ್ರೀಗಳು ಆಶೀರ್ವಚನ ನೀಡಿದರು. ಗುರುನಾಥ ಸುತಾರ ಉಪನ್ಯಾಸ ನೀಡಿದರು.  ವೇದಿಕೆಯಲ್ಲಿ ಅಶೋಕ ಬಡಿಗೇರ, ಚಿದಾನಂದ ಪತ್ತಾರ, ಭಾಸ್ಕರ ಬಡಿಗೇರ, ಡಾ. ವಿದ್ಯಾಧರ ಪತ್ತಾರ, ಸುರೇಶ ಸೋನಾರ, ಸುನೀಲ ಅರ್ಕಸಾಳಿ, ಮಹಾದೇವಿ ಪತ್ತಾರ, ಗೀತಾ ಜತ್ತಕರ್, ಬಸವರಾಜ ಬಡಿಗೇರ, ಹಣಮಂತ ಪತ್ತಾರ, ಚಂದ್ರಶೇಖರ ಪತ್ತಾರ, ಆನಂದ ಬಡಿಗೇರ, ಅನೀಲ ಬಡಿಗೇರ, ಮಹೇಶ ಪತ್ತಾರ, ವೀರೇಂದ್ರ ಕೌಲಗಿಕರ್, ಕಲ್ಲಪ್ಪ ಬಡಿಗೇರ, ಸಿದ್ದರಾಮ ಬಡಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.