ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಿ
Prioritize the effective implementation of the guarantee schemes
ಲೋಕದರ್ಶನ ವರದಿ
ಹಾವೇರಿ 13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿಯೊಂದು ಮನೆಗೂ ಪರಿಣಾಮಕಾರಿಯಾಗಿ ತಲುಪಿಸುವ ಜವಾಬ್ದಾರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎಲ್ಲ ಸದಸ್ಯರ ಮೇಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಈರ್ಪ ಮರಗಡಿ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಮುಖ್ಯಮಂತ್ರಿ ಅವರು ಗ್ಯಾರಂಟಿ ಯೋಜನೆಗಳ ರಾಜ್ಯಾಧ್ಯಕ್ಷರ ಸಭೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಸಮಿತಿ ಸದಸ್ಯರು ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಮಾರ್ಗದರ್ಶನ ನೀಡಿದ್ದಾರೆ. ಅದರಂತೆ ಎಲ್ಲ ಸದಸ್ಯರು ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಪ್ರತಿ ಸಭೆಗೆ ಹಾಜರಾಗಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಲಹೆ ಮತ್ತು ಸೂಚನೆಗಳನ್ನು ನೀಡಬೇಕು ಎಂದು ಹೇಳಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 