ಪೌರಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಆದ್ಯತೆ: ಸಕಾಲಕ್ಕೆ ವೇತನ, ಇಎಸ್‌ಐ, ಇಪಿಎಫ್ ಪಾವತಿಗೆ ಅಪರ ಜಿಲ್ಲಾಧಿಕಾರಿ ಸೂಚನೆ
Priority for civic workers' welfare: Additional Deputy Commissioner directs timely payment of wages,
ಲೋಕದರ್ಶನ ವರದಿ
ವಿಜಯಪುರ, ಸೆ.22 (ಕರ್ನಾಟಕ ವಾರ್ತೆ): ಪೌರಕಾರ್ಮಿಕರ ಹಿತರಕ್ಷಣೆ ಹಾಗೂ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡುವುದರೊಂದಿಗೆ ಪ್ರತಿ ತಿಂಗಳು ವಿಳಂಬವಿಲ್ಲದೆ ವೇತನ ಪಾವತಿಸಿ, ಇಎಸ್‌ಐ ಮತ್ತು ಇಪಿಎಫ್ ವಂತಿಗೆಗಳನ್ನು ನಿಯಮಿತವಾಗಿ ಜಮೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಓದ್ರಾಮ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ-2013ರಡಿ ನಡೆದ ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೌರಕಾರ್ಮಿಕರಿಗೆ ವೇತನ ರಸೀದಿ ನೀಡುವುದರ ಜೊತೆಗೆ, ಮಹಾನಗರ ಪಾಲಿಕೆ ಮಾದರಿಯಲ್ಲಿ ಜಿಲ್ಲೆಯ ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ನಿಯಮಿತವಾಗಿ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಬೇಕು. ತಪಾಸಣೆ ವೇಳೆ ಗಂಭೀರ ಕಾಯಿಲೆಗಳು ಕಂಡುಬಂದಲ್ಲಿ ನುರಿತ ವೈದ್ಯರಿಂದ ಸೂಕ್ತ ಚಿಕಿತ್ಸೆ ಕೊಡಿಸುವುದರ ಜೊತೆಗೆ, ಅನಾರೋಗ್ಯದ ಸಂದರ್ಭದಲ್ಲಿ ರಜೆ ಹಾಗೂ ವಿಶ್ರಾಂತಿಗೆ ಅಗತ್ಯ ಅವಕಾಶ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಖಾಯಂ ಹಾಗೂ ನೇರ ವೇತನ ಪಡೆಯುವ ಪೌರಕಾರ್ಮಿಕರಿಗೆ ಕಾಯ್ದೆಯನ್ವಯ ಅಗತ್ಯ ಸುರಕ್ಷತಾ ಪರಿಕರಗಳು, ಸಮವಸ್ತ್ರ ಹಾಗೂ ಗುರುತಿನ ಚೀಟಿಗಳನ್ನು ವಿತರಿಸಿ, ಅವುಗಳನ್ನು ಕಡ್ಡಾಯವಾಗಿ ಬಳಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಜಾಗೃತಿ ಮೂಡಿಸಬೇಕು. ಕಾರ್ಯಾಗಾರ ಹಾಗೂ ಪೌರಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳ ಕುರಿತು ಅರಿವು ಮೂಡಿಸುವಂತೆ ತಿಳಿಸಿದರು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ-2013ರ ಸೆಕ್ಷನ್ 13 ಮತ್ತು 16ರನ್ವಯ ವಿಜಯಪುರ ಜಿಲ್ಲೆಯ ಮಹಾನಗರ ಪಾಲಿಕೆ ಸೇರಿದಂತೆ ಒಟ್ಟು 15 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಸ್ತುತ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳು ಇಲ್ಲವೆಂದು ವೆಬ್‌ಪೋರ್ಟಲ್‌ನಲ್ಲಿ ದಾಖಲಿಸಲಾಗಿದೆ. ಕಾಯ್ದೆಗೆ ವಿರುದ್ಧವಾಗಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಡೆಯುತ್ತಿರುವುದು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 