ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ಬಸವರಾಜ ಶಿವಣ್ಣನವರ
Priority for temple development: MLA Basavaraja Shivannanavara
ಬ್ಯಾಡಗಿ 17: ತಾಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದಲ್ಲಿ ಕೋಟಿಯವರ ಆವರಣದಲ್ಲಿ ಇರುವ ಮೈಲಾರ ಲಿಂಗೆಶ್ವರ ಮಹಾದ್ವಾರದ ಹಾಗೂ ಶ್ರೀ ದುಂಡಿ ಬಸವೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿ.ಮಾತನಾಡಿದ ಶಾಸಕರು, ದೇವಸ್ಥಾನಗಳು ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು. ಭಕ್ತರಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ಜೊತೆಗೆ ದೇವಸ್ಥಾನಗಳ ಪಾವಿತ್ರ್ಯ ಹಾಗೂ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ದೇವಸ್ಥಾನಗಳ ಅಭಿವೃದ್ಧಿಯಿಂದ ಭಕ್ತರಿಗೆ ಅನುಕೂಲವಾಗುವುದರ ಜೊತೆಗೆ ಗ್ರಾಮಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ. ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು ಈ ಸಂದರ್ಭದಲ್ಲಿ ನಾಗರಾಜ ಆನ್ವೇರಿ, ಶಿವಪುತ್ರ್ಪ ಅಗಡಿ.ಶಿವಕುಮಾರ ಪಾಟೀಲ.ಪ್ರೇಮಾ ಅಂಗಡಿ.ಶೇಖಪ್ಪ ಮೈಲಾರ.ಮಂಜಣ್ಣ ಎಲಿ.ಸತೀಶ ಪಾಟೀಲ.ಕಮಿಟಿ ಅಧ್ಯಕ್ಷ ಮಲ್ಲಣ್ಣ ಹಾವನೂರ.ಮಂಜಣ್ಣ ಬೆನಕಿನಕೊಂಡ.ದಾನಪ್ಪ ಬಳ್ಳಾರಿ.ಬಸವಣೆಪ್ಪ ಬಳ್ಳಾರಿ.ಈರ್ಪ ಹಾದರಗೇರಿ.ಶಿವಪ್ಪ ಗುಂಡೆನಹಳ್ಳಿ.ಉಮೇಶ ಬ್ಯಾಡಗಿ.ನಾಗನಗೌಡ್ರ ಕಲ್ಲಾಪುರ . ನಿಂಗನಗೌಡ ಕಲ್ಲಾಪುರ.ಮಾರುತಿ ಜಿಂಗಾಡಿ.ಪಿ ಡಿ ಓ ಸುನಿತಾ ಗರಡಿ, ಮುಖಂಡರು, ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 