ಹಬ್ಬಗಳ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚಲು, ಸ್ವಚ್ಛತೆಗೆ ಆದ್ಯತೆ
Priority given to filling potholes and cleanliness ahead of festivals
ಬೆಳಗಾವಿ ಆ.18: ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದ ಪರಿಷತ್ ಸಭೆಯಲ್ಲಿ ನಗರದ ಅಭಿವೃದ್ಧಿ ಹಾಗೂ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಕುರಿತು ಚರ್ಚಿಸಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಮೇಯರ್ ಪ್ರೀತಿ ಕಾಮಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವುದು, ಅಗತ್ಯವಿರುವ ರಸ್ತೆಗಳನ್ನು ದುರಸ್ತಿ ಮಾಡುವುದು, ಸ್ವಚ್ಛತೆ ಸೇರಿದಂತೆ ಹಬ್ಬಗಳ ಪೂರ್ವಸಿದ್ಧತಾ ಕಾರ್ಯಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ನಗರದ ವಿವಿಧ ವಾರ್ಡ್ಗಳ ಅಭಿವೃದ್ಧಿ, ನಾಯಿಗಳ ಹಾವಳಿ ಹಾಗೂ ಕಾರ್ಯಕ್ರಮ ಪಟ್ಟಿಯಲ್ಲಿದ್ದ ಇತರ ವಿಷಯಗಳ ಬಗ್ಗೆಯೂ ಚರ್ಚೆ ನಡೆಯಿತು. ಈ ಕುರಿತು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ಮೇಯರ್ ಕೈಗೊಂಡರು.
ಸಭೆಯಲ್ಲಿ ಉಪಮೇಯರ್ ಹಣಮಂತ ಕೊಂಗಾಲಿ, ಆಯುಕ್ತ ಕಾರ್ತಿಕ್ ಎಂ., ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ್, ವಿರೋಧ ಪಕ್ಷದ ನಾಯಕ ಸೋಹೈಲ್ ಸಂಗೊಳ್ಳಿ, ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರು, ನಗರಸೇವಕರು ಹಾಗೂ ಪಾಲಿಕೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆ ಆರಂಭಕ್ಕೂ ಮುನ್ನ ಖ್ಯಾತ ಗಾಯಕಿ ಎಸ್. ಜಾನಕಿ ಹಾಗೂ ಇತ್ತೀಚೆಗೆ ನಿಧನರಾದ ಪಾಲಿಕೆಯ ಮಾಜಿ ನಗರಸೇವಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 