ಗ್ರಾಮೀಣ ರಸ್ತೆಗಳ ಸುಧಾರಣೆಗೆ ಆದ್ಯತೆ: ಶಾಸಕ ರಾಜುಗೌಡ
Priority given to improving rural roads: MLA Rajugowda
ದೇವರಹಿಪ್ಪರಗಿ 30: ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಮುಖ್ಯ ರಸ್ತೆ ಹಾಗೂ ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಸೋಮವಾರದಂದು ಹಿಟ್ನಳ್ಳಿ ತಾಂಡಕ್ಕೆ ಹೋಗುವ ಸುಧಾರಣೆ ಸಲುವಾಗಿ ಲೋಕೋಪಯೋಗಿ ಇಲಾಖೆಯ ಸನ್ 2024-25ನೇ 5054 ಅಪೆಂಡಿಕ್ಸ್-ಇ ಯೋಜನೆ ಅಡಿಯಲ್ಲಿ ಸುಮಾರು 200ಲಕ್ಷ ರೂ ವೆಚ್ಚದ ರಸ್ತೆ ಹಾಗೂ 2024-25ನೇ ಸಾಲಿನ ಪ್ರಗತಿ ಕಾಲೋನಿ ಯೋಜನೆಯಡಿಯಲ್ಲಿ ಸುಮಾರು 50ಲಕ್ಷ ರೂ ವೆಚ್ಚದ ಸಿ.ಸಿ ರಸ್ತೆಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮತಕ್ಷೇತ್ರದ ವ್ಯಾಪ್ತಿಯ ಪ್ರತಿ ಹಳ್ಳಿಗಳಲ್ಲಿ ರಸ್ತೆ ನಿರ್ಮಾಣ ಮಾಡುವುದು ನಮ್ಮ ಗುರಿಯಾಗಿದೆ, ಗ್ರಾಮಾಂತರ ಪ್ರದೇಶದಲ್ಲಿ ಅಭಿವೃದ್ಧಿ ಯಾಗಿಲ್ಲದ ಮತ್ತು ವಾಹನ, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವಲ್ಲ ರಸ್ತೆಗಳ ಮಾಹಿತಿ ಪಡೆದುಕೊಂಡಿದ್ದು, ಶೀಘ್ರದಲ್ಲೇ ಹಂತ ಹಂತವಾಗಿ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದು ಭೂಮಿ ಪೂಜೆ ನರೆವೇರಿಸಿದರು.
ರಸ್ತೆಗಳು ಬಹುದಿನಗಳ ಕಾಲ ಉಳಿಯಬೇಕೆಂಬ ದಷ್ಟಿಯಿಂದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದ್ದು, ವಿವಿಧ ಗ್ರಾಮಗಳಲ್ಲಿ ಕಾಂಕ್ರಿಟ್ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸುತ ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಹಂತ ಹಂತವಾಗಿ ಕಾಂಕ್ರೆಟ್ ರಸ್ತೆ ನಿರ್ಮಾಣ ಮಾಡುವ ಮೂಲಕ ಅಭಿವೃದ್ದಿಗೆ ಮತ್ತಷ್ಟು ಶ್ರಮಿಸಲಾಗುವುದು. ಗುತ್ತಿಗೆದಾರರು ಗುಣಮಟ್ಟದಿಂದ ರಸ್ತೆ ನಿರ್ಮಾಣ ಮಾಡಬೇಕು. ಹಾಗೇ ಗ್ರಾಮಸ್ಥರೂ ಕಾಮಗಾರಿಗಳು ಕಳಪೆಯಾಗದಂತೆ ಗಮನಹರಿಸಬೇಕೆಂದು ಹೇಳಿದರು.
ಜೆಡಿಎಸ್ ತಾಲೂಕ ಘಟಕದ ಅಧ್ಯಕ್ಷರಾದ ಸಾಯಿಬಣ್ಣ ಬಾಗೇವಾಡಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗುತ್ತಿಲ್ಲ, ಆದರೆ. ಶಾಸಕರಾದ ರಾಜುಗೌಡ ಪಾಟೀಲ ಅವರು ತಮ್ಮ ಚಾಣಾಕ್ಷತೆಯಿಂದ ಅನುದಾನ ಮಂಜೂರು ಮಾಡಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ ಅವರಿಗೆ ನಾವೆಲ್ಲರೂ ಸಹಕಾರ ನೀಡೋಣ ಎಂದು ಹೇಳಿದರು.
ಪಿಡಬ್ಲ್ಯೂಡಿ ಎಇಇ ಅರುಣಕುಮಾರ ವಡಿಗೇರಿ ಹಾಗೂ ಲ್ಯಾಂಡ ಆರ್ಮಿ ಎಇಇ ರಾಜಶೇಖರ ಅವರು ಮಾತನಾಡಿ ಕಾಮಗಾರಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಗುತ್ತಿಗೆದಾರರಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಸಿದ್ಧಗೊಂಡಪ್ಪಗೌಡ ಪಾಟೀಲ, ಮಾಜಿ ಅಧ್ಯಕ್ಷರುಗಳಾದ ಗುಂಡಪ್ಪಗೌಡ ಬಿರಾದಾರ, ರಾಜು ಚಂಡಕಿ, ಸದಸ್ಯರಾದ ಶಶಿಕಾಂತ ಚಂಡಕಿ, ಕುಮಾರಗೌಡ ಬಿರಾದಾರ, ಹಣಮಂತಗೌಡ ಬಿರಾದಾರ, ಸಂಜೀವ ಚಂಡಕಿ, ಸಲೀಂ ಕೆಂಗನಾಳ, ಜೇಟ್ಟೆಪ್ಪ ಹಿರೇ ರೋಗಿ, ಮುದುಕಪ್ಪ ಡಬ್ಬಿಗಾರ, ದಾದಾಗೌಡ ಬಿರಾದಾರ(ಗಂಗನಳ್ಳಿ), ಈರಣ್ಣ ಶಾಸ್ತ್ರಿ ಬಿರಾದಾರ, ರಮೇಶ ಈಶ್ವರ್ಪಗೋಳ, ಮಾಂತಯ್ಯ ಹಿರೇಮಠ, ದೇವಾನಂದ ಕಣಿ, ಗಂಗಾಧರ ಕಲ್ಯಾಣಿ, ಕೇಶುರಾಯ ಡಬ್ಬಿಗಾರ, ಸಂಗು ಹೊನ್ನಳ್ಳಿ, ಸಂತೋಷ್ ಸಿಂದಗಿ, ಎಸ್.ಎಂ.ಆನಂದಿ, ದೇವುಗೌಡ ಬಿರಾದಾರ, ಶಿವಪ್ಪ ಸಾವಕಾರ ಬಾಗಲಕೋಟ, ರಫೀಕ್ ಮಡ್ನಳ್ಳಿ,ರವಿ ಚವ್ಹಾಣ, ಗುತ್ತಿಗೆದಾರ ಪ್ರಕಾಶ ಅಂಗಡಿ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 