ಸಫಾಯಿ ಕರ್ಮಚಾರಿಗಳ ಕಲ್ಯಾಣ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಸಿ. ಎನ್‌. ಶ್ರೀಧರ

ಸಫಾಯಿ ಕರ್ಮಚಾರಿಗಳ ಕಲ್ಯಾಣ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಸಿ. ಎನ್‌. ಶ್ರೀಧರ Priority given to welfare of Safai Karmacharis and resolution of problems: Deputy Commissioner C. N.

 ಗದಗ 28: ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾದುದು. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್‌. ಶ್ರೀಧರ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಫಾಯಿ ಕರ್ಮಚಾರಿಗಳ ಸಮಿತಿ ತ್ರೈಮಾಸಿಕ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಯಮಿತವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಮತ್ತು ಅಗತ್ಯ ವೈದ್ಯಕೀಯ ಕಿಟ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು  ಪ್ರತಿಯೊಬ್ಬ ಕರ್ಮಚಾರಿಗೂ ಆಧುನಿಕ ಸುರಕ್ಷತಾ ಪರಿಕರಗಳಾದ ಗ್ಲೌಸ್, ಮಾಸ್ಕ್‌, ಬೂಟು ಮತ್ತು ಸಮವಸ್ತ್ರಗಳನ್ನು ವಿಳಂಬವಿಲ್ಲದೆ ಒದಗಿಸಲು ಸೂಚಿಸಲಾಯಿತು.ಸಫಾಯಿ ಕರ್ಮಚಾರಿಗಳ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ಮತ್ತು ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು ಕರ್ಮಚಾರಿಗಳ ಮಾಸಿಕ ವೇತನವನ್ನು ನಿಗದಿತ ಸಮಯದಲ್ಲಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವುದು ಮತ್ತು ಪ್ರತಿಯೊಬ್ಬರಿಗೂ ವಿಮಾ ಸೌಲಭ್ಯ  ಖಚಿತ ಪಡಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತುಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಕರ್ಮಚಾರಿಗಳು ನೇರವಾಗಿ ನಮ್ಮ ಗಮನಕ್ಕೆ ತರಬಹುದು ಎಂದು ತಿಳಿಸಿದರು.

ಸಫಾಯಿ ಕರ್ಮಚಾರಿಗಳಿಗೆ ಮೀಸಲಿರುವ ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಅರ್ಹರಿಗೆ ಮನೆಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.ಈ ಸಭೆಯಲ್ಲಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ. ಆರ್‌. ಮುಂಡರಗಿ,

ಸಫಾಯಿ ಕರ್ಮಚಾರಿಗಳ ಸಂಘದ ನಾಮನಿರ್ದೇಶಿತ  ಸದಸ್ಯರಾದ ಎಸ್‌. ಎನ್‌. ಬಳ್ಳಾರಿ, ಬಿಳೆಯಲಿ, ಶರಣಪ್ಪ ಮೂಕಪ್ಪ ಪೂಜಾರ, ಶ್ರೀಮತಿ ರೇಣುಕಾ.ಸು. ದೊಡ್ಡಮನಿ, ಶ್ರೀಮತಿ ಅಂಜನಾದೇವಿ.ಎಮ್‌. ಮ್ಯಾಗೇರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ  ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ಧಿ, ಆರೋಗ್ಯ ತಪಾಸಣೆ, ವೇತನ ಪಾವತಿ ಮತ್ತು ಸರ್ಕಾರದ ಸೌಲಭ್ಯಗಳು ತಲುಪುತ್ತಿರುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸವಾಲುಗಳು, ವೇತನ ವಿಳಂಬ, ಆರೋಗ್ಯ ಸುರಕ್ಷತೆ ಮತ್ತು ಸರ್ಕಾರದ ವಿವಿಧ ಸೌಲಭ್ಯಗಳ ಅನುಷ್ಠಾನದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.