ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಬಲಪಡಿಸಲು ಆದ್ಯತೆ: ಶಾಸಕ ಬಸವರಾಜ ಶಿವಣ್ಣನವರ
Priority on strengthening healthcare services in rural areas: MLA Basavaraja Shivannanavara
ಬ್ಯಾಡಗಿ, ಆ.29: ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಆರೋಗ್ಯ ಸೇವೆ ಲಭ್ಯವಾದರೆ ಜನರು ಚಿಕಿತ್ಸೆಗಾಗಿ ನಗರ ಪ್ರದೇಶಗಳಿಗೆ ಅಲೆಯುವುದು ತಪ್ಪುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಲಾಗುವುದು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ತಾಲೂಕಿನ ಕೆರೂರಡಿ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮತ್ತು ಕೆರೂರಡಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ?65 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಚನ್ನಿಕಟ್ಟಿ, ತಿಪ್ಪಲಾಪುರ, ಬಿಡರಕಟ್ಟಿ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಹಲವು ಸಣ್ಣ ಗ್ರಾಮಗಳಿದ್ದು, ಕೂಲಿ ಕಾರ್ಮಿಕರು ಹಾಗೂ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಗಳಿಗೂ ಇಲ್ಲಿನ ಜನರು ಪಟ್ಟಣ ಪ್ರದೇಶಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮದಲ್ಲಿಯೇ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಆಯ್ಕೆ ಮಾಡಲಾಗಿದೆ. ಸುಸಜ್ಜಿತ ಕಟ್ಟಡವನ್ನು ಶೀಘ್ರದಲ್ಲೇ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಶಾಸಕರಾದ ಬಳಿಕ ಆರೋಗ್ಯ ಕ್ಷೇತ್ರದ ಸೌಲಭ್ಯಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದು, ಜನರ ಮೂಲಸೌಕರ್ಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಅಧ್ಯಕ್ಷ ಶಂಬನಗೌಡ ಪಾಟೀಲ, ಚೆನ್ನಬಸಪ್ಪ ಹುಲ್ಲತ್ತಿ, ತಾಲೂಕು ವೈದ್ಯಾಧಿಕಾರಿ ಕಾಂತೇಶ ಭಜಂತ್ರಿ, ದ್ರಾಕ್ಷಾಯಣಿ ಎಲಿಗಾರ, ಶಿವಪುತ್ರ್ಪ ಕುಂಚೂರ, ಷಣ್ಮುಖಪ್ಪ ಕುಂಚೂರ, ಶೇಖಪ್ಪ ಮತ್ತೂರ, ಶಿವಯ್ಯ ಹೀರೆಮಠ, ಗುತ್ತಿಗೆದಾರರು, ಗ್ರಾಮ ಮುಖಂಡರು ಹಾಗೂ ಹಿರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 