ಗಾಯಗೊಂಡು ಮೊದಲ ಟೆಸ್ಟ್ನಿಂದ ಹೊರ ನಡೆದ ಪೃಥ್ವಿ
ಸಿಡ್ನಿ: ಟೀಂ ಇಂಡಿಯಾದ ಮರಿ ಸಚಿನ್ ಎಂದೇ ಗುರುತಿಸಿಕೊಂಡಿರುವ ಟೀಂ ಇಂಡಿಯಾದ ಓಪನರ್ ಪೃಥ್ವಿ ಶಾ ಮುಂಬರುವ ಆಸಿಸ್ ವಿರುದ್ಧದ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಗಾಯಗೊಂಡು ಹೊರ ನಡೆದಿದ್ದಾರೆ.
ಶುಕ್ರವಾರ ಕ್ರಿಕೆಟ್ ಸಿಡ್ನಿ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದ ಮೂರನೇ ದಿನ ಮಿಡ್ ವಿಕೆಟ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಪೃಥ್ವಿ ಗಾಯಗೊಂಡರು. ಇದರ ಪರಿಣಾಮ ಪೆವಿಲಿಯನ್ ತೆರೆಳಿದ ಪೃಥ್ವಿಯನ್ನ ಪರೀಕ್ಷಿಸಿ ತಂಡದ ಫಿಸಿಯೊ ಪ್ಯಾಟ್ರಿಕ್ ಫಹರ್ಾತ್ ಸ್ಕ್ಯಾನಿಂಗ್ ನಡೆಸಲು ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಪೃಥ್ವಿ ತೀವ್ರವಾಗಿ ಗಾಯಗೊಂಡಿರೊದ್ರಿಂದ ಅಡಿಲೇಡ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಹೊರ ನಡೆದಿದ್ದಾರೆ.
ಎರಡನೇ ದಿನದಾಟದ ಪಂದ್ಯದಲ್ಲಿ ಪೃಥ್ವಿ ಶಾ ಅರ್ಧ ಶತಕ ಬಾರಿಸಿ ಮಿಂಚಿದ್ದರು. 69 ಎಸೆತ ಎದುರಿಸಿದ್ದ ಪೃಥ್ವಿ ಶಾ 11 ಬೌಂಡರಿಗಳನ್ನ ಹೊಡೆದು 66 ರನ್ ಗಳಿಸಿ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ್ದ ಸಾಧನೆ ಮಾಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 